ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ-ಸೆ.30 ಕೊನೆ

0

ಪುತ್ತೂರು:ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಅಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕೇಂದ್ರ ಸರಕಾರ ನಿಯೋಜಿಸಲ್ಪಟ್ಟ ತಂಡದಿಂದ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ 2024-25 ನೇ ಸಾಲಿನ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನಗೆ ಅರ್ಹರಿರುವ ಕ್ರೀಡಾಪಟುಗಳಿಂದ ಅರ್ಜಿ ಅಹ್ವಾನಿಸಲಾಗಿದೆ.


ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ ಬೆಳ್ಳಿ ಮತ್ತು ಕಂಚಿನ‌ ಪದಕ ಪಡೆದ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿ ( ವೃತ್ತಿಪರ ‌ಕೋರ್ಸ್ ನ್ನು ಒಳಗೊಂಡಂತೆ) ವ್ಯಾಸಂಗ ಮಾಡುತ್ತಿರುವ ಕೇಂದ್ರ ರಾಜ್ಯ ಸರಕಾರಿ, ಅನುದಾನಿತ,ಖಾಸಗಿ ಶಾಲಾ ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ.

ಆದರೆ ಯಾವುದೇ ಅಹ್ವಾನ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.ಅಂಗವಿಕಲ ಕ್ರೀಡಾಪಟುಗಳಿಗೆ ಇದೇ ಮಾನದಂಡ ಅನ್ವಯಿಸುತ್ತದೆ.ಅವರು ಕಡ್ಡಾಯವಾಗಿ ಸರಕಾರಿ ವೈದ್ಯಕೀಯ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆ.30 ರ ಒಳಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳಾ ಕ್ರೀಡಾಂಗಣ ಮಂಗಳೂರು ಇಲ್ಲಿಗೆ ಸಲ್ಲಿಸಬೇಕೆಂದು ಪುತ್ತೂರು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರ ಶ್ರೀಕಾಂತ್ ಪೂಜಾರಿ ಬಿರಾವು ಪ್ರಕಟಣೆ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9164502107 ಈ ನಂಬರನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here