





ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಟಿ ಸ್ಟೇನ್ಸ್ ಕಂಪೆನಿ ಕೋಯಮುತ್ತೂರು ಇದರ ಸಹಯೋಗದಲ್ಲಿ ಅಡಿಕೆ ಹಾಗೂ ಇತರ ಬೆಳೆಯಲ್ಲಿ ಸಮಗ್ರ ಕೃಷಿ ನಿರ್ವಹಣೆ ಕುರಿತು ಕಾರ್ಯಾಗಾರ ಸೆ.14ರಂದು ಮದ್ಯಾಹ್ನ ಗಂಟೆ 12ಕ್ಕೆ ಸರಿಯಾಗಿ ಮುಂಡೂರು ಪ್ರಾ.ಕೃ.ಪ.ಸಹಕಾರ ಸಂಘದ ಸಭಾಭವನದಲ್ಲಿ ನಡೆಯಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಸಿ ವಿನಂತಿಸಿದ್ದಾರೆ.











