ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಜಮಾಬಂದಿ ಸಭೆ

0

ನಿಡ್ಪಳ್ಳಿ; ಬೆಟ್ಟಂಪಾಡಿ ಗ್ರಾಮ ಪಂಚಾಯಿತಿನ 2023-24  ನೇ ಸಾಲಿನ ಜಮಾಬಂದಿ ಸಭೆ ಸೆ.13 ರಂದು ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಿತು.

 ವರದಿ ಸಾಲಿನಲ್ಲಿ ನಡೆದ ಕಾಮಗಾರಿಗಳ ಲೆಕ್ಕಪತ್ರವನ್ನು ಪಿಡಿಒ ಸೌಮ್ಯ ಸಭೆಯಲ್ಲಿ ವಾಚಿಸಿದರು.ತಾಲೂಕು ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀದೇವಿ. ಪಿ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ್ದರು. ಲೆಕ್ಕ ಪತ್ರಗಳ ದಾಖಲೆ ಪರಿಶೀಲನೆ ನಡೆಸಿ ನಂತರ ಗ್ರಾಮದಲ್ಲಿ ನಿರ್ವಹಿಸಿದ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 ಪಂಚಾಯತ್ ಉಪಾಧ್ಯಕ್ಷ ಮಹೇಶ್.ಕೆ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸದಸ್ಯರಾದ ಬೇಬಿ. ಪಿ, ಸುಮಲತಾ, ಚಂದ್ರಶೇಖರ ರೈ, ಲಲಿತ, ಪಾರ್ವತಿ. ಯಂ, ಮೊಯಿದು ಕುಂಞ, ಮಹಾಲಿಂಗ ನಾಯ್ಕ, ರಮ್ಯ.ಕೆ, ಪಶು ಸಖಿ ಉಮಾವತಿ.ಯು,ಎಂ.ಬಿ.ಕೆ ಚೈತ್ರಾ, ಎಲ್.ಸಿ.ಅರ್.ಪಿ ಲೋಲಾಕ್ಷಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

     ಪಿಡಿಒ ಸೌಮ್ಯ ಸ್ವಾಗತಿಸಿ ವಂದಿಸಿದರು. ಕಾರ್ಯದರ್ಶಿ ಬಾಬು ನಾಯ್ಕ, ಸಿಬ್ಬಂದಿಗಳಾದ ಸಂದೀಪ್, ಕವಿತಾ, ಸವಿತಾ, ಚಂದ್ರಾವತಿ ಸಹಕರಿಸಿದರು.

LEAVE A REPLY

Please enter your comment!
Please enter your name here