





ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯಿಂದ ಪಂಜಳ ಶಾಂತಿಗಿರಿ ವಿದ್ಯಾನಿಕೇತನದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಫಾತಿಮತ್ ಫಾರಿಸ ಅವರು 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅರ್ಹತೆ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಮೂಡಬಿದ್ರೆಯ ರೋಟರಿ ಶಾಲೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಪುತ್ತೂರು ತಾಲೂಕಿನಿಂದ ಆಯ್ಕೆಯಾದ ಪ್ರಾಥಮಿಕ ಶಾಲಾ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಇವರು ಅಂಬಟ ನಿವಾಸಿ ಅಬ್ದುಲ್ ಗಫೂರ್ ಹಾಗೂ ಫಾತಿಮಾ ದಂಪತಿಗಳ ಪುತ್ರಿ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಬಿ ವನಿತಾರವರು ಶಾಲಾ ಶಿಕ್ಷಕರ ಸಹಕಾರದೊಂದಿಗೆ ತರಬೇತಿ ನೀಡಿರುತ್ತಾರೆ ಎಂದು ಶಾಲಾ ಮುಖ್ಯ ಗುರು ವಿಜಯ ಪಿ ತಿಳಿಸಿದ್ದಾರೆ.











