ಸೆ.24: ಒಳಮೊಗ್ರು ಗ್ರಾಮಸಭೆ – ಸೆ.17-18; ವಾರ್ಡು ಸಭೆ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಸೆ.24ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾ ಭವನದಲ್ಲಿ ನಡೆಯಲಿದೆ. ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗೆ ಮೆಸ್ಕಾಂ ಗ್ರಾಮಾಂತರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮಾರ್ಗದರ್ಶಿ ಅಧಿಕಾರಿಯಾಗಿ ಆಗಮಿಸಲಿದ್ದಾರೆ. ವಾರ್ಡು ಸಭೆಗಳು ಸೆ.17 ಮತ್ತು 18ರಂದು ನಡೆಯಲಿದೆ. ಸೆ.17 ರಂದು ವಾರ್ಡು 4 ಮತ್ತು 3 ರ ಸಭೆ ನಡೆಯಲಿದ್ದು ವಾರ್ಡು 4 ರ ಸಭೆಯು ಅಜ್ಜಿಕಲ್ಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಗ್ರಾಪಂ ಸದಸ್ಯೆ ವನಿತ ಕುಮಾರಿಯವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ನಡೆಯಲಿದೆ.

ವಾರ್ಡು 3ರ ಸಭೆಯು ಸದಸ್ಯ ಪ್ರದೀಪ್ ಎಸ್.ರವರ ಅಧ್ಯಕ್ಷತೆಯಲ್ಲಿ ದರ್ಬೆತ್ತಡ್ಕ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಅಪರಾಹ್ನ ನಡೆಯಲಿದೆ. ವಾರ್ಡು 1 ಮತ್ತು 2 ಸಭೆಯು ಸೆ.18ರಂದು ನಡೆಯಲಿದ್ದು ವಾರ್ಡು 1 ರ ಸಭೆ ಸದಸ್ಯೆ ಸುಂದರಿಯವರ ಅಧ್ಯಕ್ಷತೆಯಲ್ಲಿ ಒಳಮೊಗ್ರು ಗ್ರಾಪಂ ಸಭಾಂಗಣದಲ್ಲಿ ಬೆಳಿಗ್ಗೆ ನಡೆಯಲಿದ್ದು ವಾರ್ಡು 2 ರ ಸಭೆಯು ಸದಸ್ಯೆ ಚಿತ್ರಾ ಬಿ.ಸಿಯವರ ಅಧ್ಯಕ್ಷತೆಯಲ್ಲಿ ಕುಟ್ಟಿನೋಪಿನಡ್ಕ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಬೆಳಿಗ್ಗೆ ನಡೆಯಲಿದೆ. ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಸಭೆ ಹಾಗೂ ವಾರ್ಡು ಸಭೆಯಲ್ಲಿ ಭಾಗವಹಿಸಿ,ಗ್ರಾಮದ ಅಭಿವೃದ್ಧಿಗೆ ಪೂರಕವಾಗುವ ಸಲಹೆ ಸೂಚನೆಗಳೊಂದಿಗೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸುವಂತೆ ಗ್ರಾಪಂ ಅಭಿವೃದ್ದಿ ಅಧಿಕಾರಿ ಮನ್ಮಥ ಅಜಿರಂಗಳ, ಕಾರ್ಯದರ್ಶಿ ಜಯಂತಿ ಕೆ, ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ. ಪಂಚಾಯತ್‌ಗೆ ಪಾವತಿಸಬೇಕಾದ ವ್ಯಾಪಾರ ಪರವಾನಿಗೆ ಶುಲ್ಕ, ಕಟ್ಟಡ ತೆರಿಗೆ, ನೀರಿನ ಬಿಲ್ಲುಗಳನ್ನು ಕಡ್ಡಾಯವಾಗಿ ಪಾವತಿಸಿ ಗ್ರಾಮದ ಅಭಿವೃದ್ದಿಯಲ್ಲಿ ಸಹಕರಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here