





ಪುತ್ತೂರು : ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸೆ.15ರಂದು ಸಂಘದ ಮಹಾಸಭೆಯಂದು ಅನೇಕ ಪ್ರಶಸ್ತಿಗಳನ್ನು ಪಡೆದ ಪ್ರಸಿದ್ದ ನಾಟಿ ವೈದ್ಯ ವಾಸುದೇವ ಇಡ್ಯಾಡಿ ಮತ್ತು ಕರ್ನಾಟಕ ಸರಕಾರದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತರಾದ ಶಾರದ ಮಾಲೆತ್ತಾರು ಇವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು ಹಾಗೂ ನಿರ್ದೇಶಕರುಗಳು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪಿರವರು ತಿಳಿಸಿದ್ದಾರೆ.












