




ಪುತ್ತೂರು:ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಶಾರದೋತ್ಸವ ಸಮಿತಿಯಿಂದ ಅ.3 ರಿಂದ 12ರ ತನಕ ನಡೆಯಲಿರುವ ನವರಾತ್ರಿ ಉತ್ಸವ ಹಾಗೂ ಶಾರದೋತ್ಸವದ ಆಮಂತ್ರಣ ಪತ್ರಿಕೆಯು ಸೆ.14ರಂದು ಬಿಡುಗಡೆಗೊಂಡಿತು.



ಬೆಳಿಗ್ಗೆ ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ, ಸದಸ್ಯ ದೇವಪ್ಪ ನಾಯ್ಕ ಉಪ್ಪಳಿಗೆ, ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ಪುಷ್ಪರಾಜ ಶೆಟ್ಟಿ ಬೈರಮಜಲು, ಅಧ್ಯಕ್ಷ ಶೀನಪ್ಪ ನಾಯ್ಕ ಬದಂತಡ್ಕ, ಕಾರ್ಯದರ್ಶಿ ಹರೀಶ್ ಉಪ್ಪಳಿಗೆ, ದೇವಸ್ಥಾನದ ಸಹಾಯಕ ಅರ್ಚಕ ನಾಗರಾಜ ಭಟ್ ಹಾಗೂ ಬಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.












