ನೆಲ್ಯಾಡಿ: ಜೇಸಿಐ ನೆಲ್ಯಾಡಿ, ಮಹಿಳಾ ಜೇಸಿ ಹಾಗೂ ಜೂನಿಯರ್ ಜೇಸಿವಿಂಗ್ ನೆಲ್ಯಾಡಿ ಇದರ 41ನೇ ವರ್ಷದ ಜೇಸಿ ಸಪ್ತಾಹ ’ಡೈಮಂಡ್-2024’ ಸಪ್ತಸಂಭ್ರಮದ ೬ನೇ ದಿನವಾದ ಸೆ.14ರಂದು ಮಹಿಳಾ ದಿನಾಚರಣೆ ನೆಲ್ಯಾಡಿ ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ನೆಲ್ಯಾಡಿ ಜೇಸಿಐ ಅಧ್ಯಕ್ಷೆ ಸುಚಿತ್ರಾ ಜೆ.ಬಂಟ್ರಿಯಾಲ್ ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಉಷಾ ಅಂಚನ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಹಿಳೆಯರು ತಮಗೆ ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು. ಯಾವುದೇ ಟೀಕೆಗಳೂ ಬಂದರೂ ಅವುಗಳಿಗೆ ಕಿವಿಗೊಡದೇ ಮುನ್ನಡೆಯಬೇಕೆಂದು ಹೇಳಿದರು. ಅತಿಥಿಗಳಾಗಿದ್ದ ನೆಲ್ಯಾಡಿ ಗ್ರಾ.ಪಂ.ಸದಸ್ಯೆ ಉಷಾಜೋಯಿ, ಸೇವಾಪ್ರತಿನಿಧಿ ಹೇಮಾವತಿ, ಕೊಲ್ಯೊಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸಂಪಾವತಿ, ನೆಲ್ಯಾಡಿ ಜೇಸಿಐನ ಪೂರ್ವಾಧ್ಯಕ್ಷರೂ, ವಲಯಾಧಿಕಾರಿಯೂ ಆದ ಕೆ.ಯಂ.ದಯಾಕರ ರೈ ಅವರು ಸಂದರ್ಭೋಚಿತವಾಗಿ ಮಾತನಾಡಿದರು.
ಗೌರವಾರ್ಪಣೆ:
ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಲೀಲಾ, ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಅನುರಾಧಾ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ನೆಲ್ಯಾಡಿ ಜೇಸಿಐನ ಜೊತೆ ಕಾರ್ಯದರ್ಶಿ ಜಾಹ್ನವಿ ಐ., ಸದಸ್ಯೆ ರಶ್ಮಾ ದಯಾಕರ ರೈಯವರು ಸನ್ಮಾನಿತರನ್ನು ಪರಿಚಯಿಸಿದರು. ಸನ್ಮಾನಿತರ ಪೈಕಿ ಆರೋಗ್ಯ ಸಹಾಯಕಿ ಲೀಲಾ ಅವರು ಕೃತಜ್ಞತೆ ಸೂಚಿಸಿ ಮಾತನಾಡಿದರು.
ಯೋಜನಾ ನಿರ್ದೇಶಕರಾದ ಜಯಾನಂದ ಬಂಟ್ರಿಯಾಲ್, ಪುರಂದರ ಗೌಡ ಡೆಂಜ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಅಧ್ಯಕ್ಷೆ ಸುಚಿತ್ರಾ ಜೆ.ಬಂಟ್ರಿಯಾಲ್ ಸ್ವಾಗತಿಸಿ, ನಿರೂಪಿಸಿದರು. ಜೊತೆ ಕಾರ್ಯದರ್ಶಿ ಜಾಹ್ನವಿ ವಂದಿಸಿದರು. ಕೋಶಾಧಿಕಾರಿ ಸುಪ್ರಿತಾರವಿಚಂದ್ರ ಜೇಸಿವಾಣಿ ವಾಚಿಸಿದರು. ನೆಲ್ಯಾಡಿ ಜೇಸಿಐನ ಪೂರ್ವಾಧ್ಯಕ್ಷರಾದ ದಯಾನಂದ ಆದರ್ಶ, ಜೋನ್ ಪಿ.ಎಸ್., ಇಸ್ಮಾಯಿಲ್ ಕೆ., ಶಿವಪ್ರಸಾದ್ ಬೀದಿಮಜಲು, ಸದಸ್ಯರಾದ ಅಬ್ದುಲ್ ರಹಿಮಾನ್, ವಿನ್ಯಾಸ ಬಂಟ್ರಿಯಾಲ್, ಜಯಲಕ್ಷ್ಮೀ ಪ್ರಸಾದ್, ನವ್ಯಾಪ್ರಸಾದ್, ವಾಣಿ ಸುಂದರ ಶೆಟ್ಟಿ, ಆಶಾಕಾರ್ಯಕರ್ತೆ ವಿಜಯ ರೈ ಮತ್ತಿತರರು ಉಪಸ್ಥಿತರಿದ್ದರು.