ರಾಮಕುಂಜ: ಕಡಬ ತಾ.ಮಟ್ಟದ ಪ.ಪೂ.ಕಾಲೇಜು ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ- ಬಾಲಕರ ವಿಭಾಗದಲ್ಲಿ ರಾಮಕುಂಜ ಪ.ಪೂ.ಕಾಲೇಜು ತಂಡ ಪ್ರಥಮ

0

ರಾಮಕುಂಜ: ಕಡಬ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಬಾಲಕ ಮತ್ತು ಬಾಲಕಿಯರ ಖೋ ಖೋ ಪಂದ್ಯಾಟ ರಾಮಕುಂಜ ಶ್ರೀ ರಾಮಕುಂಜೇಶ್ವರ ಪ.ಪೂ ಕಾಲೇಜು ನಲ್ಲಿ ನಡೆಯಿತು.


ಉದ್ಘಾಟನೆಯನ್ನು ರಾಮಕುಂಜ ಗ್ರಾಮ ಪಂಚಾಯತ್ ಸದಸ್ಯ ಮತ್ತು ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾದ ಯತೀಶ್ ಬಾನಡ್ಕ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ನಂತರ ಮಾತನಾಡಿದ ಅವರು “ಖೋ ಖೋ ಭಾರತದ ಆಟ. ಈ ಆಟದ ವಿಶೇಷತೆ ಏನೆಂದರೆ, ಆಟಗಾರರಲ್ಲಿ ಶಾರೀರಿಕ ಮತ್ತು ಮಾನಸಿಕ ಸಧೃಡತೆಯನ್ನು ಪಕ್ವಗೋಳಿಸುತ್ತದೆ. ಇದು ಒಬ್ಬ ವ್ಯಕ್ತಿಯ ಸರ್ತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ.ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ ಇರುವ ಮನೋಭಾವ ಬೆಳೆಸಿಕೊಳ್ಳಿ, ಆಗ ನೀವೆಲ್ಲರೂ ನಿಜವಾದ ಕ್ರೀಡಾ ಪಟುವಾಗಲು ಸಾಧ್ಯ. ಎಲ್ಲರಿಗೂ ಶುಭವಾಗಲಿ” ಎಂದು ಹೇಳಿದರು.

ಮುಖ್ಯ ಅತಿಥಿಗಳಾದ, ಭಾರತೀಯ ಸೇನೆಯ- ಅಗ್ನಿವೀರ ಸೈನಿಕರಾದ ಜಯಪ್ರಕಾಶ್ ಮತ್ತು ಬೆಥನಿ ಪದವಿಪೂರ್ವ ಕಾಲೇಜಿನ ಪುನೀತ್ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಕೆ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಗಣೇಶ್ ಕೆ ವಂದಿಸಿದರು. ವಿದ್ಯಾರ್ಥಿನಿಯಾದ ಗ್ರೀಷ್ಮ ಮತ್ತು ಬಳಗದವರು ಪ್ರಾರ್ಥಿಸಿದರು. ಉಪನ್ಯಾಸಕ ಚೇತನ್ ಎಂ ಕಾರ್ಯಕ್ರಮ ನಿರೂಪಿಸಿದರು.

ವಿಜೇತರು: ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಬೆಥನಿ ಪದವಿ ಪೂರ್ವ ಕಾಲೇಜು ನೂಜಿಬಾಳ್ತಿಲದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಬೆಥನಿ ಪದವಿ ಪೂರ್ವ ಕಾಲೇಜು ನೂಜಿಬಾಳ್ತಿಲದ ವಿದ್ಯಾರ್ಥಿನಿಯರು ಪ್ರಥಮ, ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಸವ್ಯಸಾಚಿ ಆಟಗಾರನಾಗಿ ಸತೀಶ ರಾಮಕುಂಜ, ಉತ್ತಮ ಹಿಡಿತಗಾರನಾಗಿ ಕಾರ್ತಿಕ್ ರಾಮಕುಂಜ, ಉತ್ತಮ ಓಟಗಾರನಾಗಿ ವೆಂಕಟೇಶ್ ಬೆಥನಿ, ಬಾಲಕಿಯರ ವಿಭಾಗದಲ್ಲಿ ಸವ್ಯಸಾಚಿ ಆಟಗಾರ್ತಿಯಾಗಿ ದಿಶಾ ಬೆಥನಿ , ಉತ್ತಮ ಹಿಡಿತಗಾರ್ತಿಯಾಗಿ ಮೋಕ್ಷ ಬೆಥನಿ, ಉತ್ತಮ ಓಟಗಾರ್ತಿಯಾಗಿ ರಕ್ಷಿತಾ ರಾಮಕುಂಜ ಸಾಧನೆಯನ್ನು ಮಾಡಿದರು.

LEAVE A REPLY

Please enter your comment!
Please enter your name here