ಬಿಜೆಪಿ ಕಾರ್ಯಕರ್ತ ನಾಗೇಶ್ ನಾಯ್ಕ್ ರವರಿಗೆ ಶ್ರದ್ಧಾಂಜಲಿ ಸಭೆ

0

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತ, ಎಪಿಎಂಸಿ ಮಾಜಿ ನಿರ್ದೇಶಕ, ನರಿಮೊಗರು ಗ್ರಾ.ಪಂ ಮಾಜಿ ಸದಸ್ಯ, ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ನಾಗೇಶ್ ನಾಯ್ಕ್ ನರಿಮೊಗರುರವರಿಗೆ ಬಿಜೆಪಿಯಿಂದ ಶ್ರದ್ಧಾಂಜಲಿ ಸಭೆಯು ಸೆ.14ರಂದು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು ಮಾತನಾಡಿ ನುಡಿ ನಮನ ಸಲ್ಲಿಸಿದರು. ನರಿಮೊಗರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅಶೋಕ್ ಕುಮಾರ್ ಪುತ್ತಿಲ, ಕಾರ್ಯದರ್ಶಿ ಸತೀಶ್ ಪಾಂಬಾರ್, ನರಿಮೊಗರು ಶಕ್ತಿಕೇಂದ್ರದ ಪ್ರಮುಖ್ ಲಕ್ಷ್ಮೀ ಪ್ರಸಾದ್, ಮಹಿಳಾ ಮೋರ್ಚಾದ ಅಧ್ಯಕ್ಷೆ ಯಶೋಧ ನರಿಮೊಗರು, ಶಾಂತಿಗೋಡು ಶಕ್ತಿಕೇಂದ್ರದ ಅಧ್ಯಕ್ಷ ವಿಶ್ವನಾಥ ಬಲ್ಯಾಯ, ನರಿಮೊಗರು ಗ್ರಾ.ಪಂ ಅಧ್ಯಕ್ಷೆ ಹರಿಣಿ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಡಿ., ನಾಗೇಶ್ ರವರ ಸಹೋದರರಾದ ಕರುಣಾಕರ ನಾಯ್ಕ್, ಪ್ರವೀಣ್ ನಾಯ್ಕ್ ಬಿಜೆಪಿ ಗ್ರಾಮಾಂತರ ಮಂಡಲದ ಮಾಜಿ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ನರಿಮೊಗರು ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ಇಂದಿರಾನಗರ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ನರಿಮೊಗರು ಗ್ರಾ.ಪಂ ಸದಸ್ಯರು, ನರಿಮೊಗರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here