ಶಾಂತಿನಗರ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ-ರಾಮಕುಂಜದ ರಾಮಕುಂಜೇಶ್ವರ ತಂಡ ಪ್ರಥಮ, ಪುತ್ತೂರು ವಿವೇಕಾನಂದ ದ್ವಿತೀಯ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸರಕಾರಿ ಪ್ರೌಢಶಾಲೆ ಶಾಂತಿನಗರ ಕೋಡಿಂಬಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಸೆ.14ರಂದು ಶಾಂತಿನಗರ ಸರಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ರಾಮಕುಂಜದ ಶ್ರೀ ರಾಮಕುಂಜೇಶ್ವರ ಪ್ರೌಢಶಾಲಾ ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆಗಿದೆ. ಎರಡೂ ವಿಭಾಗಗಳಲ್ಲಿಯೂ ಪುತ್ತೂರು ವಿವೇಕಾನಂದ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ ಗಳಿಸಿದೆ.


ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಕ್ರೀಡಾಕೂಟದ ಉದ್ಘಾಟನೆ ನಡೆಯಿತು. ಮಲ್ಲಿಕಾ ಅಶೋಕ್ ಅವರು ಕ್ರೀಡಾಜ್ಯೋತಿ ಸ್ವೀಕರಿಸಿದ ಬಳಿಕ ಪುತ್ತೂರು ವಿವೇಕಾನಂದ ಪದವಿ ಕಾಲೇಜ್‌ನ ದೈಹಿಕ ಶಿಕ್ಷಣ ನಿರ್ದೇಶಕ ಯತೀಶ್ ಕುಮಾರ್ ಗೌಡ ಬಾರ್ತಿಕುಮೇರು ಅವರ ನೇತೃತ್ವದಲ್ಲಿ ಪುತ್ತೂರು ಮತ್ತು ಕಡಬ ತಾಲೂಕಿನ 30 ದೈಹಿಕ ಶಿಕ್ಷಣ ಶಿಕ್ಷಕರ ತಂಡದ ಮುಂದಾಳತ್ವದಲ್ಲಿ ಬಾಲಕರ 10 ಮತ್ತು ಬಾಲಕಿಯರ 10 ತಂಡಗಳ ನಡುವೆ ಕಬಡ್ಡಿ ಪಂದ್ಯಾಟ ನಡೆಯಿತು.


ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ ರಾಮಕುಂಜದ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲಾ ತಂಡ ಹಾಗೂ ಎರಡೂ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಪುತ್ತೂರು ತೆಂಕಿಲ ವಿವೇಕಾನಂದ ಪ್ರೌಢಶಾಲಾ ತಂಡ ಮತ್ತು ವೈಯಕ್ತಿಕ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳಿಗೆ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಗೌಡ ಅವರ ಅಧ್ಯಕ್ಷತೆಯಲ್ಲಿ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಯಿತು.


ಖ್ಯಾತ ವೈದ್ಯ ಡಾ. ರಘು ಬೆಳ್ಳಿಪ್ಪಾಡಿ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಶಾಂತಿನಗರ ಸರಕಾರಿ ಪ್ರೌಢಶಾಲೆಯಲ್ಲಿ ೨೫ ವರ್ಷ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿ ಕಳೆದ ೨ ವರ್ಷಗಳ ಹಿಂದೆ ಮುಖ್ಯೋಪಾಧ್ಯಾಯರಾಗಿ ಭಡ್ತಿ ಪಡೆದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಸರಕಾರಿ ಪ್ರೌಢಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎ. ಗೀತಾ ಶಂಕರ್, ಗುತ್ತಿಗೆದಾರ ಪ್ರಸಾದ್ ಜೈನ್ ನೀರ್ಪಾಜೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್ ಜೇಡರಪಾಲು, ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಗ್ರಾ.ಪಂ. ಸದಸ್ಯ ರಾಮಚಂದ್ರ ಪೂಜಾರಿ ಶಾಂತಿನಗರ, ಮಾಜಿ ಸದಸ್ಯ ಮೋನಪ್ಪ ಗೌಡ ಪಮ್ಮನಮಜಲು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ತಾ.ಪಂ. ಮಾಜಿ ಸದಸ್ಯ ಲಕ್ಷಣ ಗೌಡ ಬೆಳ್ಳಿಪ್ಪಾಡಿ ಮತ್ತು ಪ್ರಭಾರ ಮುಖ್ಯ ಶಿಕ್ಷಕಿ ಧನಲಕ್ಷ್ಮಿ ಬಹುಮಾನ ವಿತರಿಸಿದರು.


ಗ್ರಾ.ಪಂ. ಸದಸ್ಯ ಜಗನ್ನಾಥ ಶೆಟ್ಟಿ ನಡುಮನೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ನಿರ್ಮಲ ರೋಡ್ರಿಗಸ್ ಪ್ರಶಸ್ತಿ ವಿಜೇತರ ಪಟ್ಟಿ ವಾಚಿಸಿದರು. ಪ್ರೌಢಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುವುದರೊಂದಿಗೆ ಕ್ರೀಡಾಕೂಟದ ಸಂಭ್ರಮಕ್ಕೆ ತೆರೆ ಬಿದ್ದಿತು.

ಉದ್ಘಾಟನೆ:
ಬೆಳಿಗ್ಗೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಅವರು ಕ್ರೀಡಾ ಜ್ಯೋತಿ ಸ್ವೀಕರಿಸಿ ಪಂದ್ಯಾಕೂಟಕ್ಕೆ ಚಾಲನೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಗ್ರಾ.ಪಂ. ಸದಸ್ಯರಾದ ರಾಮಚಂದ್ರ ಪೂಜಾರಿ ಶಾಂತಿನಗರ, ಜಗನ್ನಾಥ ಶೆಟ್ಟಿ ನಡುಮನೆ, ರಾಮಣ್ಣ ಗೌಡ ಗುಂಡೋಳೆ, ಉಷಾ ಲಕ್ಷ್ಮಣ ಪೂಜಾರಿ ಕೋರ್ಯ, ಪೂರ್ಣಿಮಾ ಯತೀಶ್ ಶೆಟ್ಟಿ ಬರಮೇಲು, ಮಾಜಿ ಸದಸ್ಯ ಮೋನಪ್ಪ ಗೌಡ ಪಮ್ಮನಮಜಲು, ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ ಶಾಂತಿನಗರ, ಸರಕಾರಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರಾಯ್ ಅಬ್ರಹಾಂ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್ ಜೇಡರಪಾಲು, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಎಂ. ನಿರಂಜನ ರೈ ಮಠಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ವಿಷ್ಣುಪ್ರಸಾದ್ ಸ್ವಾಗತಿಸಿದರು. ಶಿಕ್ಷಕಿ ಜ್ಯೋತಿರಾಣಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಜಯಂತಿ ಜೆ. ವಂದಿಸಿದರು.


ಹರಿಪ್ರಸಾದ್ ರೈ ಮಠಂತಬೆಟ್ಟು ಮಾಲಕತ್ವದ ಪುತ್ತೂರು ಹೆಚ್‌ಪಿಆರ್ ಪ್ಯಾರಾಮೆಡಿಕಲ್ ಕಾಲೇಜಿನ ತಂಡ ಪಂದ್ಯಾಟದ ವೇಳೆ ಪ್ರಥಮ ಚಿಕಿತ್ಸೆಯ ವ್ಯವಸ್ಥೆ ಮಾಡಿತ್ತು. ಉಪ್ಪಿನಂಗಡಿಯ ಆರೋಗ್ಯ ನಿರೀಕ್ಷಣಾಧಿಕಾರಿ ಭರತೇಶ್, ಆಶಾ ಕಾರ್ಯಕರ್ತರಾದ ಮಮತಾ ಕಾರ್ನೋಜಿ, ಸುಪ್ರಿತಾ ಕಾರ್ನೋಜಿ, ಮೋಹಿನಿ ಬೆಳ್ಳಿಪ್ಪಾಡಿ ಮತ್ತು ಪವಿತ್ರಾ ಶೆಟ್ಟಿ ಬರಮೇಲು ಭಾಗವಹಿಸಿದ್ದರು. ಪ್ರೌಢಶಾಲೆಯ ಶಿಕ್ಷಕ ವೃಂದದವರಾದ ಲಿಂಗಪ್ಪ ಎನ್, ಬ್ಲೇಸಿ ಡಿಸೋಜಾ, ದೀಪಾ ಎಂ, ಕಚೇರಿ ಸಿಬ್ಬಂದಿ ರಘುರಾಮ, ಅಕ್ಷರ ದಾಸೋಹದ ಅಡುಗೆ ಸಿಬ್ಬಂದಿಗಳಾದ ಸುನೀತಾ ಶಾಂತಿನಗರ ಮತ್ತು ಸುನೀತಾ ಅಮೀನ್ ಸಹಕಾರ ನೀಡಿದರು. ಪುತ್ತೂರು ಪೊಲೀಸ್ ಠಾಣೆಯ ಸ್ಕರಿಯ ಮತ್ತು ಕೃಷ್ಣಪ್ಪರವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಶಾಸಕ ಅಶೋಕ್ ಕುಮಾರ್ ರೈಯವರಿಗೆ ಅಭಿನಂದನೆ

ಬೆಳಗ್ಗಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಶಾಸಕ ಅಶೋಕ್ ಕುಮಾರ್ ರೈ ಅವರು ಮಧ್ಯಾಹ್ನ ಕ್ರೀಡಾಕೂಟಕ್ಕೆ ಆಗಮಿಸಿ ಶುಭ ಹಾರೈಸಿದರು. ಶಾಂತಿನಗರ ಪ್ರೌಢಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುತ್ತಿರುವ ಶಾಸಕ ಅಶೋಕ್ ಕುಮಾರ್ ರೈಯವರಿಗೆ ಎಸ್‌ಡಿಎಂಸಿ, ಶಿಕ್ಷಕ ವೃಂದ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸಭಾ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಅಶೋಕ್ ರೈ ಅವರು ಈಗಾಗಲೇ ಈ ಪ್ರೌಢಶಾಲೆಗ ಸರಕಾರದ ಅನುದಾನ ನೀಡಲಾಗುತ್ತಿದ್ದು ಮುಂದೆಯೂ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಗೌಡ ಸ್ವಾಗತಿಸಿದರು. ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅಶೋಕ್, ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಸದಸ್ಯ ಜಗನ್ನಾಥ ಶೆಟ್ಟಿ ನಡುಮನೆ, ಮಾಜಿ ಅಧ್ಯಕ್ಷ ಎ. ಮುರಳೀಧರ ರೈ ಮಠಂತಬೆಟ್ಟು, ಮಾಜಿ ಸದಸ್ಯ ಮೋನಪ್ಪ ಗೌಡ ಪಮ್ಮನಮಜಲು ಮತ್ತಿತರರು ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಕಾರ್ಯಕ್ರಮ ನಿರೂಪಿಸಿದರು.

ನಿರ್ಮಲ ರೋಡ್ರಿಗಸ್‌ರಿಗೆ ಗೌರವಾರ್ಪಣೆ

ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಹಾಗೂ ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ಯಶಸ್ವಿಯಾಗಿ ಸಂಘಟಿಸಿದ ಶಾಂತಿನಗರ ಸರಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ನಿರ್ಮಲ ರೋಡ್ರಿಗಸ್ ಅವರಿಗೆ ಪುತ್ತೂರು ಮತ್ತು ಕಡಬ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಸಮಾರೋಪ ಸಮಾರಂಭದಲ್ಲಿ ಗೌರವಾರ್ಪಣೆ ಸಲ್ಲಿಸಿ ಅಭಿನಂದಿಸಲಾಯಿತು. ಸವಣೂರು ಸರಕಾರಿ ಪದವಿಪೂರ್ವ ದೈಹಿಕ ಶಿಕ್ಷಣ ಶಿಕ್ಷಕ ಎಂ. ಮಾಮಚ್ಚನ್‌ಎಂ. ಮಾಮಚ್ಚನ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here