ನೆಲ್ಯಾಡಿ: ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ನೆಲ್ಯಾಡಿಯ ಶಿವಪ್ರಕಾಶ್ ಮಾಣಿಯಾಣಿ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್‌ರವರ ನಿರ್ದೇಶನದ ಮೇರೆಗೆ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಅವರು ಈ ನೇಮಕ ಮಾಡಿದ್ದಾರೆ. ಕಡಬ ತಾಲೂಕು ನೆಲ್ಯಾಡಿ ಗ್ರಾಮದ ಪಡುಬೆಟ್ಟು ಬೀದಿಮಜಲು ನಿವಾಸಿಯಾಗಿರುವ ಶಿವಪ್ರಕಾಶ್ ಅವರು ನೆಲ್ಯಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.