‘ಅಮ್ಮನ ಹೆಸರಿನಲ್ಲಿ ಒಂದು ಮರ’ ಕಾರ್ಯಕ್ರಮಕ್ಕೆ ಚಾಲನೆ

0

ಪ್ರಸಕ್ತ 1.5ಕಿ.ಮೀ. ವ್ಯಾಪ್ತಿಯ ಹೆದ್ದಾರಿ ಮಧ್ಯದಲ್ಲಿ ಗಿಡ ನೆಟ್ಟ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರ

ಉಪ್ಪಿನಂಗಡಿ: ಸ್ವಚ್ಚಾ ಹೀ ಸೇವಾ ಅಭಿಯಾನ್- 2024 ರ ಅಡಿ ‘ಅಮ್ಮನ ಹೆಸರಿನಲ್ಲಿ ಒಂದು ಮರ’ ನೆಡುವ ಕಾರ್ಯಯೋಜನೆಯಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದ ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ಪೆರ್ನೆ ಎಂಬಲ್ಲಿ ಹೆದ್ದಾರಿ ಮಧ್ಯ ಹಾಗೂ ಹೆದ್ದಾರಿ ಪಾರ್ಶ್ವದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


ಹೆದ್ದಾರಿ ವಿಸ್ತರಣೆ ಕಾಮಗಾರಿಯಿಂದ ಬಹಳಷ್ಟು ಮರಗಳನ್ನು ಅನಿವಾರ್ಯ ನೆಲೆಯಲ್ಲಿ ಕಡಿಯಲಾಗಿದೆ. ಅದರ ದುಪ್ಪಟ್ಟು ಮರಗಳನ್ನು ನೆಟ್ಟು ಬೆಳೆಸುವ ಹೊಣೆಗಾರಿಕೆ ನಮ್ಮದಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ಭಾಗದಲ್ಲಿ ಸಾಧಾರಣ ಗಾತ್ರದ ಗಿಡ ಮರಗಳನ್ನು ಬೆಳೆಸಲಾಗುತ್ತಿದ್ದರೆ, ಹೆದ್ದಾರಿಯ ಉಭಯ ಪಾರ್ಶ್ವದಲ್ಲಿ ಪ್ರಯೋಜನಕಾರಿ ಮರಗಳನ್ನು ನೆಟ್ಟು ಬೆಳೆಸಲಾಗುವುದು. ಸಾರ್ವಜನಿಕರೂ ಕೂಡಾ ಎಲ್ಲೆಲ್ಲಿ ಮರಗಿಡಗಳನ್ನು ಬೆಳೆಸಲು ಸಾಧ್ಯವಿದೆಯೋ ಅಲ್ಲೆಲ್ಲಾ ಗಿಡ ಮರಗಳನ್ನು ನೆಟ್ಟು ಬೆಳೆಸಬಹುದೆಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ತೋಟಗಾರಿಕಾ ಅಧಿಕಾರಿ ಆಶಿಕಾ ತಿಳಿಸಿದರು.


ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ 1.5ಕಿ.ಮೀ. ವ್ಯಾಪ್ತಿಯಲ್ಲಿ ಹೆದ್ದಾರಿ ಮಧ್ಯದಲ್ಲಿ ಗಿಡಗಳನ್ನು ನೆಡಲಾಯಿತು. ಹೆದ್ದಾರಿಯುದ್ದಕ್ಕೂ ಎರಡೂ ಪಾರ್ಶ್ವದಲ್ಲಿ ಗಿಡಗಳನ್ನು ನೆಡುವ ಕಾರ್ಯವನ್ನು ಮಾಡಲಾಯಿತು.


ಈ ಕಾರ್ಯಕ್ರಮದಲ್ಲಿ ಕೆಎನ್‌ಆರ್ ಸಂಸ್ಥೆಯ ರೆಸಿಡೆನ್ಶಿಯಲ್ ಎಂಜಿನಿಯರ್ ವಿವೇಕಾನಂದ ಮಠಪತಿ, ಪ್ರಾಜೆಕ್ಟ್ ಮೆನೇಜರ್ ರಘುನಾಥ ರೆಡ್ಡಿ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here