ಸೆ.22:ಡೊನ್ ಬೊಸ್ಕೊ ಕ್ಲಬ್ ನಿಂದ ಪ್ರತಿಭಾ ಪುರಸ್ಕಾರ

0

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಆವರಣದಲ್ಲಿನ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಡೊನ್ ಬೊಸ್ಕೊ ಕ್ಲಬ್ ಇದರ ಆಶ್ರಯದಲ್ಲಿ ಪುತ್ತೂರಿನ ವಿದ್ಯಾರ್ಥಿ ಸಾಧಕರನ್ನು ಮತ್ತು ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಬೆಂಬಲಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ-2024 ಕಾರ್ಯಕ್ರಮವು ಸೆ.22 ರಂದು ಬೆಳಿಗ್ಗೆ ಮಾಯಿದೆ ದೇವುಸ್ ಚರ್ಚ್ ಸಭಾಭವನದಲ್ಲಿ ಜರಗಲಿದೆ.


ಮುಖ್ಯ ಅತಿಥಿಯಾಗಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ, ಗೌರವ ಉಪಸ್ಥಿತಿಯಾಗಿ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್ ರವರು ಉಪಸ್ಥಿತಲಿರುವರು. ಅಧ್ಯಕ್ಷತೆಯನ್ನು ಡೊನ್ ಬೊಸ್ಕೊ ಕ್ಲಬ್ ಅಧ್ಯಕ್ಷ ಅಂತೋನಿ ಒಲಿವೆರಾರವರು ವಹಿಸಿಕೊಳ್ಳಲಿದ್ದಾರೆ ಎಂದು ಡೊನ್ ಬೊಸ್ಕೊ ಕ್ಲಬ್ ಕಾರ್ಯದರ್ಶಿ ಜ್ಯೋ ಡಿ’ಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here