ನಿಡ್ಪಳ್ಳಿ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯದ ನವೋದಯ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸೆ.19 ರಂದು ನಡೆಯಿತು.
ಜಿಲ್ಲಾ ಜನಜಾಗೃತಿ ವೇದಿಕೆಯ ತಾಲೂಕು ಸದಸ್ಯ ಜಗನ್ನಾಥ ರೈ ಕೊಮ್ಮಂಡ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ತಾಲೂಕು ಯೋಜನಾಧಿಕಾರಿ ಶಶಿಧರ ಎಂ ಜನಜಾಗೃತಿ ಕಾರ್ಯಕ್ರಮ ಹಾಗೂ ಯೋಜನೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರು ಲಿಟ್ಲ್ ಫ್ಲವರ್ ಶಾಲಾ ಶಿಕ್ಷಕ ಬಾಲಕೃಷ್ಣ ರೈ ಪೋರ್ದಾಲ್ ಸ್ವಾಸ್ಥ್ಯ ಸಂಕಲ್ಪ ಮಾಡುವ ಉದ್ದೇಶ ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ಹದಿ ಹರೆಯದ ವಿದ್ಯಾರ್ಥಿಗಳ ಜವಾಬ್ದಾರಿ ಹಾಗೂ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಂತೆ ಯಾವ ರೀತಿ ಎಚ್ಚರಿಕೆಯಿಂದ ಸಮಾಜದಲ್ಲಿ ನಡೆದುಕೊಳ್ಳಬೇಕು ಎಂಬ ಬಗ್ಗೆ ಮಾರ್ಗದರ್ಶನ ಮಾಹಿತಿ ನೀಡಿದರು.
ಶಾಲಾ ಮುಖ್ಯ ಗುರು ಪುಷ್ಪಾವತಿ.ಎಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಿದ್ಯಾರ್ಥಿಗಳಾದ ಕೃತಿಕಾ, ತೃಪ್ತಿ ಪ್ರಾರ್ಥಿಸಿದರು. ಸಹ ಶಿಕ್ಷಕಿ ಸುಮಂಗಳ ಸ್ವಾಗತಿಸಿದರು. ಶಿಕ್ಷಕಿ ಶೋಭಾ ವಂದಿಸಿದರು.ವಲಯ ಮೆಲ್ವೀಚಾರಕ ಸೋಹನ್. ಜಿ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಜಗನ್ನಾಥ ಪಾಟಾಳಿ ಹಾಗೂ ಶಾಲಾ ಶಿಕ್ಷಕ ವೃಂದ ವಿದ್ಯಾರ್ಥಿ ವೃಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.