ನರೇಂದ್ರ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ವಾಲಿಬಾಲ್ ಪಂದ್ಯಾಟ – ಉದ್ಘಾಟನೆ

0

puttur: ಈ ಕ್ರೀಡೆಯು ಒಬ್ಬ ವಿದ್ಯಾರ್ಥಿಯ ಬೌದ್ಧಿಕ ಸಾಮರ್ಥ್ಯ ಮತ್ತುಕಲ್ಪನಾ ಶಕ್ತಿಯನ್ನು ವೃದ್ಧಿಸುವಲ್ಲಿ ಸಹಕಾರಿಯಾಗಿದೆ. ಇಂತಹ ಕ್ರೀಡೆಗಳು ಮನೋಲ್ಲಾಸವನ್ನು ಹೆಚ್ಚಿಸುತ್ತದೆ. ಪಠ್ಯದಜೊತೆಗೆ ಕ್ರೀಡಾಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ತೊಡಗಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಜೀವನದ ಸವಾಲುಗಳಿಗೆ ಕ್ರೀಡೆಗಳು ಮಕ್ಕಳನ್ನು ಸಿದ್ಧಪಡಿಸುತ್ತವೆ. ಆರೋಗ್ಯಕರ ದೇಹದ ಬೆಳವಣಿಗೆಗೆ ಪೌಷ್ಟಿಕ ಆಹಾರವು ಅತ್ಯಗತ್ಯವಾದಂತೆ, ಆರೋಗ್ಯಕರ ಮನಸ್ಸಿನ ಬೆಳವಣಿಗೆಗೆ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯ. ಕ್ರೀಡೆಯನ್ನು ಶಿಕ್ಷಣದ ಅವಿಭಾಜ್ಯ ಅಂಗವಾಗಿಸದೆ ಸಮಗ್ರ ಶಿಕ್ಷಣದ ಉದಾತ್ತ ಗುರಿಗಳನ್ನು ಸಾಕಾರಗೊಳಿಸಲು ಸಾಧ್ಯವಿಲ್ಲ. ಎಂದು ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಮಂಗಳೂರು ಇದರ ಅಧ್ಯಕ್ಷ ಸತೀಶ್ ಕುಮಾರ್ ಹೇಳಿದರು.


ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮಂಗಳೂರು ಮತ್ತು ನರೇಂದ್ರ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.


ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನರೇಂದ್ರ ಪದವಿ ಪೂರ್ವಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ ರವರು ಮಾತನಾಡುತ್ತಾದೈಹಿಕ ಚಟುವಟಿಕೆಯು ಅರಿವಿನ ಮತ್ತು ಸ್ಮರಣೆಯ ಕಾರ್ಯಗಳನ್ನು ಹೆಚ್ಚಿಸುತ್ತದೆ . ಇದು ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕ್ರೀಡೆಗಳು ವಿದ್ಯಾರ್ಥಿಗಳಿಗೆ ಹೆಚ್ಚು ಗಮನ, ಪ್ರೇರಣೆ ಮತ್ತು ಕೇಂದ್ರೀಕೃತವಾಗಿರಲು ಸಹಾಯ ಮಾಡುವುದರಿಂದ, ಇದು ಅವರ ಶೈಕ್ಷಣಿಕ ಕಾರ್ಯಕ್ಷಮತೆಯ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.ಇಂದಿನ ಯುವಜನತೆಯಲ್ಲಿ ಕ್ರೀಡೆಯ ಮಹತ್ವವನ್ನು ಮತ್ತು ಕ್ರೀಡಾಕೌಶಲ್ಯದ ಅರಿವನ್ನು ಮೂಡಿಸುವಲ್ಲಿ ಈ ರೀತಿಯ ಪಂದ್ಯಾಟಗಳು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ.ಎಂದು ಹೇಳಿದರು.


ವೇದಿಕೆಯಲ್ಲಿ ನರೇಂದ್ರ ಪದವಿ ಪೂರ್ವಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಸಂತೋಷ ಬಿ., ಪುತ್ತೂರು ತಾಲೂಕಿನ ಕ್ರೀಡಾ ಸಂಯೋಜಕ ಪುನೀತ್ ಉಪಸ್ಥಿತರಿದ್ದರು.
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದಾಮೋದರ , ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಯತೀಶ್, ಪಟ್ಟೆ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ , ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ದೈಹಿಕ ಶಿಕ್ಷಣ ಶಿಕ್ಷಕ ನಂದಕುಮಾರ್ ಸಹಕರಿಸಿದರು.


ಈ ಸಮಾರಂಭದಲಿ ನರೇಂದ್ರ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ, ಕಾಲೇಜಿನ ಕ್ರೀಡಾಸಂಘದ ನಾಯಕಿ, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನಾ ಬಿ. ವಂದಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ಅಗಮ್ಯ ಕಾರ‍್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here