ದೇವಾಲಯಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸಬೇಕು- ಧಾರ್ಮಿಕ ದತ್ತಿ ಇಲಾಖೆ ಆದೇಶ

0

ಪುತ್ತೂರು: ತಿರುಪತಿ ಲಡ್ಡು ವಿವಾದ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶದಲ್ಲಿ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here