ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ‘ಜ್ಯೋತಿರ್ಗಮಯ’ ಕಾರ್ಯಕ್ರಮ

0

ವಿವೇಕಾನಂದ ಕಾನೂನು ಮಹಾವಿದ್ಯಾಲಯ ಸಂಸ್ಕಾರಯುತ ಕಾನೂನು ಶಿಕ್ಷಣ ನೀಡುತ್ತಿದೆ: ರಘುರಾಜ್ ಉಬರಡ್ಕ

ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಕಾಲೇಜು ಆರಂಭೋತ್ಸವ ಹಾಗೂ ಮೂರು ದಿನಗಳ ಕಾಲ ನಡೆಯಲಿರುವ ಪ್ರಥಮ ಎಲ್.ಎಲ್.ಬಿ. ಹಾಗೂ ಪ್ರಥಮ ಬಿಎ ಎಲ್ ಎಲ್ ಬಿ ವಿದ್ಯಾರ್ಥಿಗಳಿಗೆ 3 ದಿನಗಳ ಓರಿಯಂಟೇಶನ್ ಕಾರ್ಯಕ್ರಮ ‘ಜ್ಯೋತಿರ್ಗಮಯಕ್ಕೆ ಚಾಲನೆ ನೀಡಲಾಯಿತು. ಕಾಲೇಜು ಆರಂಭೋತ್ಸವದ ಹಿನ್ನಲೆಯಲ್ಲಿ ಗಣಪತಿ ಹವನ ಕಾರ್ಯಕ್ರಮ ನಡೆಯಿತು.

ನಂತರ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಯೋಜಕರು ಹಾಗೂ ವಿದ್ಯಾಭಾರತಿಯ ಕರ್ನಾಟಕ ಪ್ರಾಂತ ಕ್ರಿಯಾಶೋದ್ ಪ್ರಮುಖ್ ಆಗಿರುವ ರಘುರಾಜ್ ಉಬರಡ್ಕ ‘ಜ್ಯೋತಿರ್ಗಮಯ’ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆಯ ಮೂಲಕ ಚಾಲನೆಯನ್ನು ನೀಡಿದರು. ನಂತರ ಮಾತನಾಡಿದ ಅವರು, ವಿದ್ಯೆಯೊಂದಿಗೆ ಸಂಸ್ಕಾರ ಇದ್ದರೇ ಮಾತ್ರ ವಿದ್ಯಾವಂತನಿಗೆ ಸಮಾಜದಲ್ಲಿ ಬೆಲೆ ಇರುತ್ತದೆ. ಅಕ್ಷರ ಜ್ಞಾನದ ಜತೆಗೆ ಉತ್ತಮ ಸಂಸ್ಕಾರವನ್ನೂ ಕೊಡುವ ಕೆಲಸ ಇಂದಿನ ಅವಶ್ಯಕವಾಗಿದೆ. ಬಲಿಷ್ಠವಾದ ವಿದ್ಯಾರ್ಥಿ ಸಮೂಹವನ್ನು ಸಮಾಜಕ್ಕೆ ಬೇಕಾದ ರೀತಿಯಲ್ಲಿ ಸಂಸ್ಕಾರವಂತರನ್ನಾಗಿ ರೂಪಿಸುವ ಕೆಲಸವನ್ನು ನಮ್ಮ 80ಕ್ಕಿಂತಲೂ ಅಧಿಕವಾಗಿರುವ ವಿವೇಕಾನಂದ ವಿದ್ಯಾಸಂಸ್ಥೆಗಳು ನಿರ್ವಹಿಸುತ್ತಿದೆ. ಮುಖ್ಯವಾಗಿ ಗುಣಮಟ್ಟದ ಸಂಸ್ಕಾರಯುತ ಕಾನೂನು ಶಿಕ್ಷಣ ನೀಡುವ ಗುರಿಯನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಇಟ್ಟುಕೊಂಡು ಅದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು. ಸಮಾಜದ ಆಗುಹೋಗುಗಳಿಗೆ ಸ್ಪಂದಿಸುವ, ಸ್ವಾರ್ಥರಹಿತ ಹಾಗೂ ಅತ್ಯಂತ ಉತ್ತಮ ಕಾನೂನು ತಜ್ಞರನ್ನು ರೂಪಿಸುವಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಈಗಾಗಲೇ ಗುರುತಿಸಿಕೊಂಡಿದೆ. ಅಂತಹ ವಿದ್ಯಾಸಂಸ್ಥೆಯನ್ನು ಆಯ್ದುಕೊಂಡಿರುವ ನೀವು, ಇಲ್ಲಿರುವ ಎಲ್ಲಾ ಉತ್ತಮ ಅಂಶಗಳನ್ನು ಪಡೆದುಕೊಂಡು ಭವಿಷ್ಯದಲ್ಲಿ ಉತ್ತಮ ವೃತ್ತಿಪರರಾಗಲು ನಿಮ್ಮ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಬದ್ಧತೆ, ಸಮರ್ಪಣೆ ಮತ್ತು ಪರಿಶ್ರಮವನ್ನು ಮೈಗೂಡಿಸಿಕೊಳ್ಳಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಮಾತನಾಡಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಸಂಚಾಲಕರಾದ ವಿಜಯನಾರಾಯಣ ಕೆ.ಎಂ ಮಾತನಾಡಿ, ಜನ್ಮ ಕೊಟ್ಟ ಹೆತ್ತವರು, ಅಕ್ಷರ ಕಲಿಸಿದ ಗುರುಗಳು, ಆಡಿ ಬೆಳೆದ ಭೂಮಿಯ ಋಣವನ್ನು ನಾವೆಂದು ತೀರಿಸಲು ಸಾಧ್ಯವಿಲ್ಲ. ಅಂತಹ ಶ್ರೇಷ್ಠ ಭಾರತೀಯ ಮೌಲ್ಯವನ್ನು ಇಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ನಮ್ಮ ಮಹಾವಿದ್ಯಾಲಯದಲ್ಲಿ ಮಕ್ಕಳಿಗೆ ಕಾನೂನು ವಿಷಯದ ಪಠ್ಯಕ್ರಮದೊಂದಿಗೆ ಆದರ್ಶ ಜೀವನದ ಮೌಲ್ಯಗಳನ್ನೂ ಹೇಳಿಕೊಡಲಾಗುತ್ತಿದೆ. ಅದಕ್ಕಾಗಿ ವಿವಿಧ ಸಹಪಠ್ಯ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಕಾನೂನು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗದ ಸವಾಲುಗಳನ್ನು ಎದುರಿಸಲು ಬೇಕಾದ ಎಲ್ಲಾ ರೀತಿಯ ಸೌಕರ್ಯಗಳನ್ನು ನಿಮಗೆ ಒದಗಿಸಲಾಗುತ್ತಿದೆ. ನೀವು ಮುಂದಿನ ಐದು ವರ್ಷಗಳ ಕಾಲ ಇಲ್ಲಿಗೆ ನಿಮ್ಮನ್ನು ಸಮರ್ಪಸಿಕೊಂಡು ವಿದ್ಯಾಭ್ಯಾಸ ಮಾಡಿದರೆ ಖಂಡಿತ ಅದ್ಬುತ ಭವಿಷ್ಯ ನಿಮ್ಮದಾಗಲಿದೆ ಎಂದರು.

ವೇದಿಕೆಯಲ್ಲಿ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ.ಬಿ.ಕೆ.ರವೀಂದ್ರ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾರಾದ ಅಕ್ಷತಾ ಎ. ಪಿ. ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕು. ಶ್ರೀ ರಕ್ಷಾ ವಂದಿಸಿದರು. ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಂಧ್ಯಾ ಪಿಎಂ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ವಿಶೇಷ ಮಾರ್ಗದರ್ಶಕ ತರಗತಿಗಳನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here