ಮುಡಾ ಹಗರಣದಲ್ಲಿ ಭಾಗಿಯಾದ ಸಿ ಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದ ಮಾನ್ಯ ಉಚ್ಚ ನ್ಯಾಯಾಲಯದ ತೀರ್ಪನ್ನು ಪುತ್ತೂರು ಬಿಜೆಪಿ ಸ್ವಾಗತಿಸುತ್ತದೆ.
‘ಅಧಿಕಾರದ ಮದದಿಂದ ನಾನು ನಡೆದ್ದದೇ ದಾರಿ ಎಂದು ಅಘೋಷಿತ ತುರ್ತು ಪರಿಸ್ಥಿತಿಯ ಆಡಳಿತವನ್ನು ನಡೆಸುತ್ತಾ ಕರ್ನಾಟಕ ರಾಜ್ಯವನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಗೆ ಇದು ನಿಶ್ಚಿತ ಪಾಠವಾಗಿದೆ. ನ್ಯಾಯಾಲಯದ ಈ ತೀರ್ಪಿನ ಮೂಲಕ ನ್ಯಾಯಾಂಗ ವ್ಯವಸ್ಥೆಯ ನಂಬಿಕೆ ಬಲಗೊಂಡಿದೆ. ಸಂವಿಧಾನದ ಮೇಲೆ ನಿಜವಾದ ನಂಬಿಕೆ ಇರುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಭಾರತೀಯ ಜನತಾ ಪಕ್ಷದ ಗ್ರಾಮಾಂತರ ಮಂಡಲ ಪುತ್ತೂರು ಇದರ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.