ಪ್ರಸಾದ ಮತ್ತು ದಾಸೋಹ ಪದಾರ್ಥಗಳ ಗುಣಮಟ್ಟ ಪರಿಶೀಲನೆ ಕಡ್ಡಾಯ

0


ಪುತ್ತೂರು:
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ತಯಾರಿಸಲ್ಪಡುವ ಪ್ರಸಾದ ಮತ್ತು ಅನ್ನ ದಾಸೋಹಕ್ಕೆ ಬಳಸುವ ಪದಾರ್ಥಗಳ ಗುಣಮಟ್ಟವನ್ನು ಕಡ್ಡಾಯವಾಗಿ ಕಾಪಾಡಿಕೊಳ್ಳುವುದಕ್ಕಾಗಿ ಇನ್ನು ಮುಂದೆ ಪ್ರತೀ ಮೂರು ತಿಂಗಳಿಗೊಮ್ಮೆ ಸಂಬಂಧಪಟ್ಟ ಆಹಾರ ಸಂರಕ್ಷಣಾಧಿಕಾರಿಯವರಿಂದ ದೇವಾಲಯದ ಪ್ರಸಾದ ಮತ್ತು ಅನ್ನ ದಾಸೋಹ ಹಾಗೂ ಅದಕ್ಕೆ ಬಳಸತಕ್ಕ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರೀಕ್ಷಿಸಿಕೊಂಡು ವರದಿ ನೀಡುವಂತೆ ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶಿಸಲಾಗಿದೆ.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ಪ್ರತಿನಿತ್ಯ ದೇವರ ದರ್ಶನಾರ್ಥಿಗಳಾಗಿ ಭಕ್ತಾದಿಗಳು ಮತ್ತು ಸಾರ್ವಜನಿಕರು ಆಗಮಿಸುತ್ತಿರುತ್ತಾರೆ.ಇಲಾಖೆಯ ವ್ಯಾಪ್ತಿಯಲ್ಲಿರುವ ಪ್ರಮುಖ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ಪ್ರತಿನಿತ್ಯ ಪ್ರಸಾದ ಮತ್ತು ಅನ್ನ ದಾಸೋಹ ಸೇವೆಯನ್ನು ನೀಡಲಾಗುತ್ತಿದ್ದು, ಈ ಸೇವೆಗಳಿಗೆ ಉಪಯೋಗಿಸತಕ್ಕ ಪದಾರ್ಥಗಳ ಗುಣಮಟ್ಟವನ್ನು ಕಾಪಾಡಿಕೊಂಡು ಸಾರ್ವಜನಿಕ ಭಕ್ತಾದಿಗಳ ಆರೋಗ್ಯ ಮತ್ತು ಆಹಾರ ಸುರಕ್ಷತೆಯನ್ನು ಕಾಯ್ದುಕೊಳ್ಳುವುದು ಹಾಗೂ ಸ್ವಚ್ಛತೆಯನ್ನು ಪಾಲಿಸುವುದು ಬಹಳ ಮುಖ್ಯವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ತಯಾರಿಸಲ್ಪಡುವ ಪ್ರಸಾದ ಮತ್ತು ಅನ್ನ ದಾಸೋಹಕ್ಕೆ ಬಳಸುವ ಪದಾರ್ಥಗಳ ಗುಣಮಟ್ಟವನ್ನು ಕಡ್ಡಾಯವಾಗಿ ಕಾಪಾಡಿಕೊಳ್ಳುವುದಕ್ಕಾಗಿ ಇನ್ನು ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ಸಂಬಂಧಪಟ್ಟ ಆಹಾರ ಸಂರಕ್ಷಣಾಧಿಕಾರಿಯವರಿಂದ ದೇವಾಲಯದ ಪ್ರಸಾದ ಮತ್ತು ಅನ್ನ ದಾಸೋಹ ಹಾಗೂ ಅದಕ್ಕೆ ಬಳಸತಕ್ಕ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರೀಕ್ಷಿಸಿಕೊಂಡು ಕಚೇರಿಗೆ ವರದಿ ನೀಡುವಂತೆ ಹಾಗೂ ಪ್ರಸಾದ ಮತ್ತು ಅನ್ನ ದಾಸೋಹ ತಯಾರಿಸುವ ಸ್ಥಳ ಮತ್ತು ಉಗ್ರಾಣವನ್ನು ಸ್ವಚ್ಛತೆಯಿಂದ ನಿರ್ವಹಿಸುವುದು ಮತ್ತು ಈ ಸ್ಥಳಗಳಲ್ಲಿ ಸಿ.ಸಿ.ಟಿ.ವಿ ಅಳವಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಿ ಇದನ್ನು ಖಚಿತಪಡಿಸಿಕೊಳ್ಳಲು ಹಿಂದು ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ.

LEAVE A REPLY

Please enter your comment!
Please enter your name here