ಕಾಣಿಯೂರು ಶ್ರೀ ಅಮ್ಮನವರ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

0

ಕಾಣಿಯೂರು: ಕಾಣಿಯೂರು ಶ್ರೀ ಅಮ್ಮನವರ ಕ್ಷೇತ್ರದಲ್ಲಿ ನಡೆಯಲಿರುವ ನವರಾತ್ರಿ ಉತ್ಸವ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಸಭೆಯು ಕಾಣಿಯೂರು ಶ್ರೀ ಅಮ್ಮನವರ ಕ್ಷೇತ್ರದಲ್ಲಿ ನಡೆಯಿತು.

ಕಾಣಿಯೂರು ಶ್ರೀ ಮಠದ ವ್ಯವಸ್ಥಾಪಕ ಶ್ರೀನಿಧಿ ಭಟ್ ಅವರು ಮಾತನಾಡಿ, ಅಮ್ಮನವರ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವು ವಿಜೃಂಭಣೆಯಿಂದ, ಯಶಸ್ವಿಯಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು. ಕಾಣಿಯೂರು ಮಠದ ಅರ್ಚಕ ಬಾಲಕೃಷ್ಣ ಅಸ್ರಣ್ಣ, ಅಜಿತ್, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ, ಶಿವರಾಮ ಉಪಾಧ್ಯಾಯ ಕಲ್ಪಡ, ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪರಮೇಶ್ವರ ಅನಿಲ ಸ್ವಾಗತಿಸಿ, ಪದ್ಮಯ್ಯ ಗೌಡ ಅನಿಲ ವಂದಿಸಿದರು.

LEAVE A REPLY

Please enter your comment!
Please enter your name here