ನೆಲ್ಯಾಡಿ ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ಸಂಘದ ಕಾರ್ಯ ಚಟುವಟಿಕೆಗಳ ಉದ್ಘಾಟನೆ

0

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯ ನೆಲ್ಯಾಡಿ ಘಟಕ ಕಾಲೇಜಿನ ವಾಣಿಜ್ಯ ಸಂಘದ ಕಾರ್ಯಚಟುವಟಿಕೆಗಳ ಉದ್ಘಾಟನೆ ಸೆ.24ರಂದು ನಡೆಯಿತು.


ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ವಾಣಿಜ್ಯ ವಿಭಾಗದ ಉಪನ್ಯಾಸಕಿ ಗೀತಾ ಅವರು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ವೃತ್ತಿ ಜೀವನಕ್ಕೆ ಬೇಕಾದ ಕೌಶಲ್ಯ, ಮಾರ್ಗದರ್ಶನ ಹಾಗೂ ರೂಪುರೇಷೆಗಳನ್ನು ನೀಡುವಲ್ಲಿ ವಾಣಿಜ್ಯ ಸಂಘವು ಬಹುಮುಖ್ಯ ಪಾತ್ರ ವಹಿಸುತ್ತದೆ. ಅದರ ಪ್ರಯೋಜನ ಪಡೆದುಕೊಂಡು ಜೀವನದಲ್ಲಿ ಯಶಸ್ವಿಯಾಗಿ ಮುನ್ನಡೆಯಿರಿ ಎಂದು ಹೇಳಿ ಶುಭ ಹಾರೈಸಿದರು. ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೆರೋನಿಕಾ ಪ್ರಭರವರು ಪ್ರಾಸ್ತಾವಿಕ ನುಡಿಗಳ್ನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಹಸಂಯೋಜಕರಾದ ಡಾ| ಸೀತಾರಾಮರವರು ಮಾತನಾಡಿ, ಶಿಲಾಯುಗ ಕಾಲದಿಂದಲೂ ವ್ಯವಹಾರ ಮನುಷ್ಯನ ಜೀವನದಲ್ಲಿ ಎಷ್ಟು ಹಾಸುಹೊಕ್ಕಾಗಿದೆ ಹಾಗೆಯೇ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನದ ಜೊತೆಗೆ ಮುಂದೆ ಸಾಗಿ ಎಂದರು.
ಕಾರ್ಯಕ್ರಮ ಆಯೋಜಕರಾದ ಪಾವನ ಸ್ವಾಗತಿಸಿದರು. ವಿದ್ಯಾರ್ಥಿನಿ ಸಹನ ವಂದಿಸಿದರು. ಅವಮ್ಮ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here