





ವಿಟ್ಲ: ಮಂಗಳೂರಿನ ದ. ಕ. ಕೃಷಿ ಅಭಿವೃದ್ದಿ ಸಹಕಾರಿ ಸಂಘ (SKADS) ದಲ್ಲಿ 2023-24ನೇ ಸಾಲಿನಲ್ಲಿ ಅತೀ ಹೆಚ್ಚು ವ್ಯವಹಾರ ನಡೆಸಿದ ಹಿನ್ನೆಲೆಯಲ್ಲಿ ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಬಿ. ಸುಧಾಕರ್ ಶೆಟ್ಟಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ನಾಯ್ಕ ಇವರನ್ನು ಸಂಘದ ಮಹಾಸಭೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರವೀಂದ್ರ ಕಂಬಳಿ, ನಿರ್ದೇಶಕರು ಹಾಗೂ ಸಹಕಾರ ಸಂಘಗಳ ಉಪನಿಬಂಧಕರು ಉಪಸ್ಥಿತರಿದ್ದರು.












