ನಾಳೆ(ಅ.01): ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಕೆ.ಶೇಖರ ರೈ ಕುರಿಕ್ಕಾರ ಅವರಿಗೆ ಬೀಳ್ಕೊಡುಗೆ ಸಮಾರಂಭ

0

ಪುತ್ತೂರು: ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿಯಾಗಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕೆ.ಶೇಖರ ರೈ ಕುರಿಕ್ಕಾರ ಅವರಿಗೆ ಬೀಳ್ಕೊಡುಗೆ ಸಮಾರಂಭ ಅ.1ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ. ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಎ.ರಕ್ಷಿತ್ ರೈ ಮುಗೇರು ಸಭಾಧ್ಯಕ್ಷತೆ ವಹಿಸಲಿದ್ದು, ದ.ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ ಬಳಜ್ಜ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ಸನ್ಮಾನ ನಡೆಸಿಕೊಡಲಿದ್ದಾರೆ. ಹಿರಿಯ ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ಸಹಕಾರಿ ಸಂಘಗಳ ಅಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎ.ರಕ್ಷಿತ್ ರೈ ಮುಗೇರು, ಉಪಾಧ್ಯಕ್ಷ ವಸಂತ ಶೆಟ್ಟಿ ಕಲ್ಲಡ್ಕ, ವಿಸ್ತರಣಾಧಿಕಾರಿ ಮಾಲತಿ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಮತ್ತು ಸರ್ವ ಸದಸ್ಯರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here