ಕೊಕ್ಕಡ ಸ.ಪ್ರೌಢಶಾಲೆಯಲ್ಲಿ ಅ.3ರಿಂದ ಅ.9ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

0

ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9ರವರೆಗೆ ನಡೆಯಲಿದೆ.


ಅ.3ನೇ ಗುರುವಾರ ಅಪರಾಹ್ನ ಗಂಟೆ 2.30ಕ್ಕೆ ಶಿಬಿರದ ಉದ್ಘಾಟನಾ ಸಮಾರಂಭವು ನಡೆಯಲಿದ್ದು, ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಉದ್ಘಾಟನೆಯನ್ನು ಮಾಡಲಿದ್ದಾರೆ. ಸಭಾಧ್ಯಕ್ಷತೆಯನ್ನು ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ರೆ.ಫಾ.ನೋಮಿಸ್ ಕುರಿಯಕೋಸ್ ವಹಿಸಲಿದ್ದಾರೆ. ಅತಿಥಿಗಳಾಗಿ ಕೊಕ್ಕಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ದಾಮೋದರ ಗೌಡ, ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ವಿಶ್ವನಾಥ ರೈ, ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನ ಧರ್ಮಗುರು ರೆ.ಫಾ.ಶಾಜಿ ಮ್ಯಾತ್ಯು, ಕೊಕ್ಕಡ ಬದ್ರಿಯಾ ಜುಮ್ಮಾ ಮಸೀದಿಯ ಗುರು ರಜಾಕ್ ಸುಲ್ತಾನ್ ಧಾರಿಮಿ, ಕೊಕ್ಕಡ ಸರಕಾರಿ ಪ್ರೌಢಶಾಲೆ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉಮ್ಮರ್ ಬೈಲಂಗಡಿ ಭಾಗವಹಿಸಲಿದ್ದಾರೆ. ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಪ್ರಾಚಾರ್ಯ ಏಲಿಯಾಸ್.ಎಂ.ಕೆ ಶುಭಾಶಂಸನೆ ಮಾಡಲಿದ್ದಾರೆ.


ಕಾಲೇಜಿನ ಸಂಚಾಲಕ ರೆ.ಫಾ.ನೋಮಿಸ್ ಕುರಿಯಾಕೋಸ್ ಹಾಗೂ ಪ್ರಾಚಾರ್ಯ ಏಲಿಯಾಸ್.ಎಂ.ಕೆ ಅವರ ನಿರ್ದೇಶನದಲ್ಲಿ ಮತ್ತು ಆಡಳಿತ ಮಂಡಳಿ, ಸಹ ಶಿಬಿರಾಧಿಕಾರಿಗಳ ಸಹಕಾರದಲ್ಲಿ ಶಿಬಿರ ನಡೆಯಲಿದೆ. ಎಂದು ಎನ್ಎಸ್ಎಸ್ ಶಿಬಿರಾಧಿಕಾರಿ ವಿಶ್ವನಾಥ ಶೆಟ್ಟಿ.ಕೆ ಉಪನ್ಯಾಸಕ ತಿಳಿಸಿದರು.

LEAVE A REPLY

Please enter your comment!
Please enter your name here