ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಮಹಾನಗರ ಪಾಲಿಕೆ, ನೆಹರು ಯುವ ಕೇಂದ್ರ ಹಾಗೂ ದ.ಕನ್ನಡ ಜಿಲ್ಲಾ ಯುವ ಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಸುದಾನ ಶಾಲೆಯ ನಿಕೋಲಸ್ ರೋನಿನ್ ಮಥಾಯಿಸ್ (10ನೇ) ಇವರು 200ಮೀ ಫ್ರೀ ಸ್ಟೈಲ್ ನಲ್ಲಿ ದ್ವಿತೀಯ ಹಾಗೂ 200 ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅನಿಖಾ ಯು (10ನೇ) ಇವರು 100 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನ, 100 ಮೀ ಫ್ರೀ ಸ್ಟೈಲ್ ನಲ್ಲಿ ದ್ವಿತೀಯ, 100 ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಪ್ರಥಮ, ಹಾಗೂ 100ಮೀ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಪುತ್ತೂರು ಬಾಲವನದ ಈಜು ತರಬೇತುದಾರ ತ್ರಿಶೂಲ್, ದೀಕ್ಷಿತ್, ವಿಶಾಲ್, ಸೀತರಾಮ ಹಾಗೂ ಪ್ರಫುಲ ರವರು ತರಬೇತಿ ನೀಡಿರುತ್ತಾರೆ.
ವಿಜೇತರನ್ನು ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿದ್ದಾರೆ.