





ರಾಮಕುಂಜ: ’ಕರ್ನಾಟಕ ಸಂಭ್ರಮ-50’ಕಾರ್ಯಕ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ ರಾಜ್ಯದೆಲ್ಲೆಡೆ ಸಂಚರಿಸುತ್ತಿರುವ ಕರ್ನಾಟಕ ಜ್ಯೋತಿ ರಥಯಾತ್ರೆ ಸೆ.30ರಂದು ಬೆಳಿಗ್ಗೆ ಬೆಳ್ತಂಗಡಿಯಿಂದ ಉಪ್ಪಿನಂಗಡಿ ಮಾರ್ಗವಾಗಿ ಕಡಬ ತಾಲೂಕಿಗೆ ಆಗಮಿಸಿತು.


ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ವತಿಯಿಂದ ರಾಮಕುಂಜ-ಆತೂರಿನಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಸ್ವಾಗತ ಕೋರಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈ ರಾಮಕುಂಜ, ಕಡಬ ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ ರಾಮಕುಂಜ, ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ಪದಾಧಿಕಾರಿಗಳಾದ ಜನಾರ್ದನ ಗೌಡ ಪಣೆಮಜಲು, ಮಹಮ್ಮದ್ ಕುಂಞಿ ಕಡಬ, ಬಾಲಚಂದ್ರ ಮುಚ್ಚಿಂತಾಯ, ಕಿಶೋರ್ ಕುಮಾರ್ ಬಿ., ಪ್ರೇಮಾ ರಾಮಕುಂಜ, ರಮ್ಯಾ, ಉಮೇಶ್ ಸಾಯಿರಾಮ್, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪಾಲ ರಾವ್, ಕೊಯಿಲ ಶಾಖಾ ಮೇನೇಜರ್ ಆನಂದ ಗೌಡ ಪಜ್ಜಡ್ಕ, ಸಿಬ್ಬಂದಿ ಲೋಕನಾಥ ರೈ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.














