ಅ.3 ರಿಂದ 12: ನಿಡ್ಪಳ್ಳಿ ದೇವಾಲಯದಲ್ಲಿ ನವರಾತ್ರಿ ಉತ್ಸವ -ವಿವಿಧ ಧಾರ್ಮಿಕ ಕಾರ್ಯಕ್ರಮ

0

ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿ ನವರಾತ್ರಿ ಉತ್ಸವ ಅ.3 ರಿಂದ 12ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.

ಅ.3ರಂದು ಪೂರ್ವಾಹ್ನ ಗಂಟೆ 8ರಿಂದ ಶ್ರೀ ಮಹಾಗಣಪತಿ ಹವನ ನಂತರ ಶ್ರೀ ದೇವರಿಗೆ ಪಂಚವಿಂಶತಿ ಕಲಶ ಗಂಟೆ 10 ಕ್ಕೆ ಪ್ರಸನ್ನ ಕುಮಾರ್ ಮಾರ್ತ ದೀಪ ಬೆಳಗಿಸಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಿರುವರು. ನಂತರ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಮಂದಾರಗಿರಿ ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7 ರಿಂದ ಮಹಾಪೂಜೆ, ಶ್ರೀ ದೇವರಿಗೆ ಸಾಮೂಹಿಕ ವಿಶೇಷ ರಂಗ ಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.

ಅ.8ರಂದು ಬೆಳಿಗ್ಗೆ ಗಂಟೆ 9 ರಿಂದ ಸಾಮೂಹಿಕ ಚಂಡಿಕಾ ಹೋಮ ಪ್ರಾರಂಭ.ಮಧ್ಯಾಹ್ನ ಗಂಟೆ 12 ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ ನಂತರ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಅ.11 ರಂದು ಬೆಳಿಗ್ಗೆ ಗಂಟೆ 9ರಿಂದ ವಿಶೇಷ ಆಯುಧ ಪೂಜೆ ಪ್ರಾರಂಭ.ಸಂಜೆ ಗಂಟೆ 6 ರಿಂದ ಸಾಮೂಹಿಕ ದುರ್ಗಾಪೂಜೆ ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಅ.12 ರಂದು ಬೆಳಿಗ್ಗೆ ಗಂಟೆ 8 ಕ್ಕೆ ಕದಿರು ತುಂಬಿಸುವುದು.ಗಂಟೆ 9 ರಿಂದ ಅಕ್ಷರಾಭ್ಯಾಸ. ಮಧ್ಯಾಹ್ನ ವಿಜಯದಶಮಿ ಪ್ರಯುಕ್ತ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.

ಪ್ರತಿ ದಿನದ ಕಾರ್ಯಕ್ರಮ: ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಪ್ರತಿದಿನ ಸಂಜೆ ದೇವರಿಗೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ. ಅಲ್ಲದೆ ಪ್ರತಿದಿನ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಮತ್ತು ಸದಸ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here