ಇಂದ್ರಪ್ರಸ್ಥ ವಿದ್ಯಾ ಸಂಸ್ಥೆಯಲ್ಲಿ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0

ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನವನ್ನು ಆಚರಿಸಲಾಯಿತು.

ಈ ವೇಳೆ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ 10 ನೇ ತರಗತಿಯ ವಿದ್ಯಾರ್ಥಿನಿ ವನೀಷಾ ಮಾತನಾಡಿ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಉತ್ತಮ ಆದರ್ಶಗಳನ್ನು ವಿದ್ಯಾರ್ಥಿಗಳಾದ ನಾವು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ಸಹಶಿಕ್ಷಕಿ ಆಶಿತಾ ಮಾತನಾಡಿ ದೇಶದ ಬೆನ್ನೆಲುಬಾದ ರೈತರನ್ನು ಹಾಗೂ ರಾಷ್ಟ್ರ ರಕ್ಷಕರಾದ ಸೈನಿಕರನ್ನು ಗೌರವಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹೆ.ಕೆ. ಪ್ರಕಾಶ್ , ಸಂಸ್ಥೆಯ ಮುಖ್ಯ ಶಿಕ್ಷಕಿಯಾದ ವೀಣಾ ಆರ್ ಪ್ರಸಾದ್, ಉಪನ್ಯಾಸಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here