ಸಂಪ್ಯದಲ್ಲಿ 22ನೇ ವರ್ಷದ ಪುತ್ತೂರು ದಸರಾ ಮಹೋತ್ಸವ – ಗಣಪತಿ ಸಹಿತ ನವದುರ್ಗೆಯರ ವಿಗ್ರಹ ಪ್ರತಿಷ್ಠೆ

0

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿಯ ನೇತೃತ್ವದಲ್ಲಿ ಪುತ್ತೂರು ತಾಲೂಕನ್ನು ಕೇಂದ್ರವಾಗಿರಸಿಕೊಂಡು ಸಂಪ್ಯ ಶ್ರೀ ವಿಷ್ಣುಮೂರ್ತಿ ಅನ್ನಪೂಣೇಶ್ವರಿ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ಅ.14ರ ತನಕ ನಡೆಯುವ ಶ್ರೀ ಗಣಪತಿ, ಶಾರದೆ, ನವದುರ್ಗೆಯರ ಸಹಿತ ಪುತ್ತೂರು ದಸರಾ ಮಹೋತ್ಸವದಲ್ಲಿ ಅ.3ರಂದು ವಿಗ್ರಹಪ್ರತಿಷ್ಠೆ ನಡೆಯಿತು.


ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ನಡೆಯುವ ವೈದಿ ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಅವರು ಪುತ್ತೂರು ದಸರಾವನ್ನು ಉದ್ಘಾಟಿಸಿ ಮಾತನಾಡಿ ಮಂಗಳೂರು ದಸರಾದಂತೆ ಪುತ್ತೂರಿನಲ್ಲಿ ವೈಭವದ ದಸರಾ ಮೆರುಗು ನೀಡಿ ರಾಜ್ಯದ ಜನತೆಯ ಒಂದು ಭಾರಿ ಪುತ್ತೂರಿನ ದಸರಾದಲ್ಲೂ ಭಾಗವಹಿವಂತಾಗಲಿ ಎಂದರು.

ಉದ್ಯಮಿ ರಮೇಶ್ ಪ್ರಭು ಅವರು ಧ್ವಜವನ್ನು ಏರಿಸಿ ಶುಭ ಹಾರೈಸಿದರು. ಆರ್ಯಾಪು ಗ್ರಾ.ಪಂ ಉಪಾಧ್ಯಕ್ಷ ಅಶೋಕ್ ನಾಯ್ಕ್, ಪುತ್ತೂರು ದಸರಾ ಉತ್ಸವ ಸಮಿತಿ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ, ಕಾಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ, ಪ್ರಧಾನ ಕಾರ್ಯದರ್ಶಿ ನೇಮಾಕ್ಷ ಸುವರ್ಣ, ಉಪಾಧ್ಯಕ್ಷ ಜಯಂತ ಶೆಟ್ಟಿ ಕಂಬಳತ್ತಡ್ಡ, ಗೌರವ ಸಲಹೆಗಾರ ರಾಜೇಶ್ ಬನ್ನೂರು, ಮಂಜಪ್ಪ ರೈ ಬಾರಿಕೆ ಸಹಿತ ಸಮಿತಿ ಸದಸ್ಯರು, ಊರವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here