ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕಿಶೋರ್ ಕುಮಾರ್ ಪುತ್ತೂರು ಮಂಗಳೂರು ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ಸಂಸದ ಬ್ರಿಜೇಶ್ ಚೌಟ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.