ಮಣಿಕ್ಕರ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದೂರ್ ಶಾಸ್ತ್ರೀ ಜಯಂತಿ

0

ಪುತ್ತೂರು: ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದೂರ್ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಎಸ್ .ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಸೈಯ್ಯದ್ ಗಫೂರ್ ಸಾಹೇಬ್, ಶಾಲಾ ಮುಖ್ಯ ನಳಿನಿ ಕೆ,ಹಾಗೂ ಶಿಕ್ಷಕರು,ವಿದ್ಯಾರ್ಥಿಗಳು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು.ದೀಪ ಬೆಳಗುವುದರೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ಪುಷ್ಪ ನಮನ, ಭಜನೆ, ಸರ್ವಧರ್ಮ ಪ್ರಾರ್ಥನೆ, ವಿದ್ಯಾರ್ಥಿಗಳಿಂದ ಭಾಷಣ,ಪೋಷನ್ ಅಭಿಯಾನದ ಪ್ರಯುಕ್ತ ನಡೆದ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ  ಹಾಗೂ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ಮುಕ್ತಾಯವಾಯಿತು .

ಕಾರ್ಯಕ್ರಮದ ಕೊನೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದವರು ಎಲ್ಲರಿಗೂ ಸಿಹಿಯನ್ನು ಹಂಚಿದರು.

ಕನ್ನಡ ಶಿಕ್ಷಕಿ ವಸಂತಿಅವರು ಸ್ವಾಗತಿಸಿ,ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಮಣಿಯಾಣಿಯವರು ವಂದಿಸಿದರು.ಶಿಕ್ಷಕಿ ಸುಗುಣ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here