ರಾಮಕುಂಜ: ದ.ಕ.ಜಿಲ್ಲಾ ಪಂಚಾತ್, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಚೇರಿ(ಆಡಳಿತ)ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ಹಾಗೂ ಕಪಿತಾನಿಯೊ ಹಿರಿಯ ಪ್ರಾಥಮಿಕ ಶಾಲೆ ಕಂಕನಾಡಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಬಾಲಕ/ಬಾಲಕಿಯರ ಖೋ ಖೋ ಪಂದ್ಯಾಟ ಅ.೩ರಂದು ಮಂಗಳೂರು ಕಂಕನಾಡಿ ಕಪಿತಾನಿಯೋ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಬಾಲಕರ ವಿಭಾಗದಲ್ಲಿ ಹಳೆನೇರೆಂಕಿ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ ತಂಡ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ಹಳೆನೇರೆಂಕಿ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ ತಂಡ ತೃತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ವಿಭಾಗದಲ್ಲಿ ಅಕ್ಷಯ ಗೌಡ, ನೂತನ್ ಹಾಗೂ ಕಿಶನ್ ವಿಭಾಗ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಬಿ., ತರಬೇತುದಾರ ಮಾಧವ ಬಿ.ಎಮ್.ಅವರು ತರಬೇತಿ ನೀಡಿದ್ದರು.