ಈಜು ಸ್ಪರ್ಧೆಯಲ್ಲಿ ಫಿಲೋಮಿನಾ ಪ್ರೌಢಶಾಲಾ ವಿದ್ಯಾರ್ಥಿ ಅಮೈ ಭಟ್ ರಾಜ್ಯಮಟ್ಟಕ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಹಾಗೂ ಸಂತ ಅಲೋಶಿಯಸ್ ಪ್ರಾಥಮಿಕ ಶಾಲೆ ಕೋಡಿಯಾಲಬೈಲು ಇವರ ಜಂಟಿ ಆಶ್ರಯದಲ್ಲಿ, ಸಂತ ಅಲೋಶಿಯಸ್ ಶಾಲೆಯ ಈಜು ಕೊಳದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ್ರೌಢಶಾಲಾ ವಿದ್ಯಾರ್ಥಿ ಅಮೈ ಭಟ್ 400 ಮೀಟರ್ ಮತ್ತು 200 ಮೀಟರ್ ಫ್ರೀ ಸ್ಟೈಲ್ ಈಜು ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಹಾಗೂ 100 ಮೀಟರ್ ಫ್ರೀ ಸ್ಟೈಲ್ ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ರಾಜ್ಯಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರು ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಸೌಮ್ಯ ಭಟ್‌ರವರ ಪುತ್ರ.

LEAVE A REPLY

Please enter your comment!
Please enter your name here