ಫುಟ್ಬಾಲ್ ಪಂದ್ಯಾಟ: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆ ರಾಜ್ಯಮಟ್ಟಕ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಹಾಗೂ ಸಂತ ಜೋಸಫರ ಪದವಿ ಪೂರ್ವ ಕಾಲೇಜು ಬಜೆಪೆ ಇವರ ಸಂಯುಕ್ತ ಆಶ್ರಯದಲ್ಲಿ ಸಂತ ಜೋಸಫರ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ 17ರ ವಯೋಮಿತಿಯ ಬಾಲಕರ ವಿಭಾಗದ ಮೈಸೂರು ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದೆ.

ತಂಡದಲ್ಲಿ 11 ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಮಂಗಳೂರಿನ ಮಾರ್ನಿಂಗ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟದ ತಂಡದಲ್ಲಿ ಭಾಗವಹಿಸಿದ್ದ ಮಹಮದ್ ರಾಹಿಲ್ ಇದ್ರಿಸ್ ಬೆಸ್ಟ್ ಪ್ಲೇಯರ್ ಆಫ್ ದ ಟೂರ್ನಮೆಂಟ್ ಪ್ರಶಸ್ತಿ ಪಡೆದಿದ್ದರು.

LEAVE A REPLY

Please enter your comment!
Please enter your name here