ಇಚ್ಲಂಪಾಡಿ ನೇರ್ಲ ಶಾಲೆಯಲ್ಲಿ ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0

ನೆಲ್ಯಾಡಿ: ಇಚ್ಲಂಪಾಡಿ ನೇರ್ಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅ.2ರಂದು ಆಚರಿಸಲಾಯಿತು.


ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಗಾಂಧೀಜಿಯವರಿಗೆ ಪ್ರಿಯವಾದ ಭಜನೆಗಳನ್ನು ಹಾಡಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಬಿಜೇರು, ಶಿಕ್ಷಕರಾದ ಡಾ| ಗಿರೀಶ್ ಅವರು ಮಾತನಾಡಿ ಮಹಾತ್ಮ ಗಾಂಧೀಜಿಯವರ ತತ್ವಗಳಾದ ಅಹಿಂಸೆ, ಸತ್ಯ, ಪ್ರಾಮಾಣಿಕತೆ, ಸ್ವಾಭಿಮಾನ, ಸರಳತೆಯನ್ನು ಮಕ್ಕಳಿಗೆ ತಿಳಿಸಿ ಜೀವನದಲ್ಲಿ ಅಳವಡಿಸುವಂತೆ ಹೇಳಿ, ರಾಷ್ಟ್ರೀಯ ಸ್ವಚ್ಛತಾ ದಿವಸದ ಮಹತ್ವವನ್ನು ತಿಳಿಸಿದರು. ಮುಖ್ಯ ಶಿಕ್ಷಕಿ ಜಯಶ್ರೀ ಎಸ್ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಮತ್ತು ಶಾಲಾ ಮಕ್ಕಳು ಭಾಗವಹಿಸಿದರು.

LEAVE A REPLY

Please enter your comment!
Please enter your name here