ಅ.11 ಕಾಂಗ್ರೆಸ್‌ನಿಂದ ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರ ಮುಖಾಮುಖಿ ಸಮಾವೇಶ-ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ

0

ಪುತ್ತೂರು: ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹಾಗೂ ಹರೀಶ್ ಕುಮಾರ್‌ರವರೊಂದಿಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಮುಖಾಮುಖಿ ಸಮಾವೇಶ ನಡೆಸುವ ಬಗ್ಗೆ ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್‌ಗಳ ಪೂರ್ವಭಾವಿ ಸಭೆಯು ಅ.6ರಂದು ಸಂಜೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಯಿತು.

ಪುತ್ತೂರಿನಲ್ಲಿ ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಮುಖಾಮುಖಿ ಸಮಾವೇಶವು ಅ.11ರಂದು ಮಧ್ಯಾಹ್ನ 2 ಗಂಟೆಗೆ ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಸಭಾ ಭವನದಲ್ಲಿ ನಡೆಸುವುದಾಗಿ ತೀರ್ಮಾನಿಸಲಾಯಿತು. ಇದಕ್ಕೆ ಪೂರಕವಾಗಿ ಗ್ರಾಮ, ವಲಯ ಮಟ್ಟದಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರಚಾರ ಸಭೆ ನಡೆಸಲಾಗುವುದು.

ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್‌ಗಳ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ನಾಯಕರುಗಳು ಗ್ರಾಮ, ವಲಯಗಳಲ್ಲಿ ಭೇಟಿ ನೀಡಿ ಸಭೆ ನಡೆಸಲಾಗುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿ.ಪಂ ಮಾಜಿ ಸದಸ್ಯ ಎಂ.ಎಸ್ ಮೊಹಮ್ಮದ್, ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಸೇವಾ ದಳದ ಜಿಲ್ಲಾಧ್ಯಕ್ಷ ಜೋಕಿಂ ಡಿ ಸೋಜ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ರಾಜರಾಮ್ ಕೆ.ಬಿ., ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ ಚಂದ್ರ ಆಳ್ವ, ಪಕ್ಷದ ಪ್ರಮುಖರಾದ ನಿರ್ಮಲ್ ಕುಮಾರ್ ಜೈನ್, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ವಿಶ್ವಜಿತ್ ಅಮ್ಮುಂಜ, ದಾಮೋದರ ಭಂಡಾರ್‌ಕರ್, ಸನತ್ ಕುರಿಯ, ನೂರುದ್ದೀನ್ ಸಾಲ್ಮರ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here