





ಸವಣೂರು: ವಿಧಾನಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಚಿಸಿದೆ.


ಸಂಚಾಲಕರಾಗಿ ಕ್ಯಾ.ಗಣೇಶ್ ಕಾರ್ಣಿಕ್, ಜಿಲ್ಲಾ ಸಹ ಸಂಚಾಲಕರಾಗಿ ಬಿಜೆಪಿ ದ.ಕ.ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರನ್ನು ನಿಯೋಜನೆ ಮಾಡಲಾಗಿದೆ.





ರಾಕೇಶ್ ರೈ ಕೆಡೆಂಜಿ ಅವರು ಸವಣೂರು ಗ್ರಾ.ಪಂ.ಉಪಾಧ್ಯಕ್ಷರಾಗಿ ,ಬಿಜೆಪಿ ಸುಳ್ಯ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ,ಸುಳ್ಯ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ದ.ಕ.ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅಲ್ಲದೇ ವಿವಿಧ ಸಂಘ ಸಂಸ್ಥೆಗಳು ,ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದಾರೆ.










