ಸಾಲೆತ್ತೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ – ಪ್ರಯಾಣಿಕರು ಅಪಾಯದಿಂದ ಪಾರು

0

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕೊಳ್ನಾಡು ಗ್ರಾಮದ ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆದಿದೆ.

ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಸಾಲೆತ್ತೂರು ಜಂಕ್ಷನ್ ತಲುಪುತ್ತಿದ್ದಂತೆ, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಭಾರಿ ಗಾತ್ರದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಭಾಗಶ: ಜಖಂಗೊಂಡಿದ್ದು ಅಪಘಾತದ ತೀವ್ರತೆಗೆ ಎರಡು ಸುರಕ್ಷಾ ಬಲೂನ್ ತೆರದುಕೊಂಡ ಹಿನ್ನೆಲೆಯಲ್ಲಿ ಚಾಲಕ ಮತ್ತು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here