ವಿಧಾನಪರಿಷತ್ ಉಪಚುನಾವಣೆ: ಪುತ್ತೂರು, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಜನಪ್ರತಿನಿಧಿಗಳ, ಕಾರ್ಯಕರ್ತರ ಸಭೆ

0

ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು – ದಿನೇಶ್ ಗುಂಡೂರಾವ್

ಪುತ್ತೂರು : ಒಳ್ಳೆಯ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಈ ಭಾರಿ ನಿಲ್ಲಿಸಿದೆ. ಆದರೆ ಈ ವಿಧಾನ ಪರಿಷತ್ ಉಪಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದು‌ಕೊಂಡು ಕೆಲಸ ಮಾಡಬೇಕು ಎಂದು ರಾಜ್ಯ ಕುಟುಂಬ ಕಲ್ಯಾಣ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.


ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಅ.11 ರಂದು ನಡೆದ ಪುತ್ತೂರು , ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಜನಪ್ರತಿನಿಧಿಗಳ ಮತ್ತು ಕಾರ್ಯಕರ್ತರ ಸಮಾವೇಶವನ್ನು ಅವರು ಉದ್ಘಾಟಿಸಿ ಮಾತನಾಡಿದರು.


ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ‌ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ವಿಧಾನಪರಿಷತ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್, ಮಾಜಿ ಸಚಿವರಾದ ಜಿಲ್ಲೆಯ ಕಾಂಗ್ರೆಸ್ ಚುನಾವಣಾ ಸಂಯೋಜಕ‌ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಡಿ, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್, ಕೆ ಪಿ ಸಿ ಪ್ರ ಕಾರ್ಯ ಜಿ ಎ ಬಾವ , ಸಂಯೋಜಕ ಕಾವು, ಸದಸ್ತ ಪ್ರಸಾದ್, ನವೀನ್ ಭಂಡಾರಿ, ಕೆಪಿಸಿಸಿ ಸಂಯೋಜಕ ಪ್ರದೀಪ್ ಕುಮಾರ್ ರೈ ಪಾಂಬಾರು, ಬೆಳ್ತಂಗಡಿ ರಂಜನ್ ಗೌಡ, ಗ್ಯಾರೆಂಟಿ ಸಮಿತಿ ಅಧ್ಯಕ್ಷ ಮಂಜುನಾಥ ಪೆರ್ನೆ, ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ನೂರುದ್ದೀನ್ ಸಾಲ್ಮರ, ಜೋಕಿಂ ಡಿ ಸೋಜ, ಎಮ್ ಎಸ್ ಮಹಮ್ಮದ್, ಪ್ರಸಾದ್ ಕೌಶಲ್ ಶೆಟ್ಟಿ, ಕೆಪಿಸಿಸಿ ಸಂಯೋಜಕ ಸತೀಶ್ ಕುಮಾರ್ ಕೆಡೆಂಜಿ ಸಹಿತ ಹಲವು ಮಂದಿ ಉಪಸ್ಥಿತರಿದ್ದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಸಚಿವರನ್ನು ಗೌರವಿಸಿದರು.ವಿಟ್ಲ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಪದ್ಮನಾಭ ಪೂಜಾರಿ ಸ್ವಾಗತಿಸಿದರು.
ಜಿಲ್ಲಾ ಸೇವಾದಳದ ಸಂಚಾಲಕ ಜೋಕಿಂ ಡಿ ಸೋಜ ವಂದೇ ಮಾತರಂ ಹಾಡಿದರು. ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here