ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆಯುವ ಉಚಿತ ವೈದ್ಯಕೀಯ ಶಿಬಿರದ 31ನೇ ಶಿಬಿರವು ಅ.6ರ ದು ದೇವಸ್ಥಾನದ ಆವರಣದಲ್ಲಿ ನಡೆಯಿತು.
ಶಿಬಿರವನ್ನು ಜನೌಷಧಿ ಕೇಂದ್ರದ ಅನಿಲ್ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಸದಸ್ಯ ಲಕ್ಷ್ಮಣ್ ಬೈಲಾಡಿ, ನವಚೇತನಾ ಯುವಕ ಮಂಡಲದ ಅಧ್ಯಕ್ಷ ಜಯಂತ ಶೆಟ್ಟಿ ಕಂಬಳತ್ತಡ್ಡ, ಕಾರ್ಯದರ್ಶಿ ಪ್ರವೀಣ್, ಉಜಿರೆ ಎಸ್‌ಡಿಎಂ ಕಾಲೇಜಿನ ಸಹ ಪ್ರಾಧ್ಯಾಪಕಿ ಹರಿಣಿ ಪುತ್ತೂರಾಯ, ಜಯರಾಮ ಪಂಜಳ, ತೇಜಸ್ ಸಂಪ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಿಬಿರದಲ್ಲಿ ತಜ್ಞರಿಂದ ಸಾಮಾನ್ಯ ವೈದ್ಯಕೀಯ ತಪಾಸಣೆ, ಎಲುಬು ಮತ್ತು ಕೀಲು ತಪಾಸಣೆ, ಇ.ಓ.ಖಿ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ, ಔಷಧಿಗಳು ಉಚಿತವಾಗಿ ವಿತರಿಸಲಾಯಿತು. ನವಚೇತನ ಯುವಕ ಮಂಡಲ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಐಕ್ಯ ಕಲಾ ಸೇವಾ ಟ್ರಸ್ಟ್, ಐಡಿಯಲ್ ಲ್ಯಾಬೊರೇಟರಿ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು, ಉಷಾ ಸ್ಕ್ಯಾನ್ ಸೆಂಟರ್ ದರ್ಬೆ, ಪುತ್ತೂರು ಡಯಾಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ತೆಂಕಿಲ, ಹಾಗೂ ಹಲವು ಔಷಧಿ ಕಂಪೆನಿಗಳು ಶಿಬಿರದಲ್ಲಿ ಸಹಕರಿಸಿದ್ದರು. ನೂರಾರು ಮಂದಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.