ಬಾಂಬಿಲ: ರಸ್ತೆ ಬದಿಯ ಅಡಿಕೆ ತೋಟಕ್ಕೆ ಬಿದ್ದ ಕಾರು

0

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಬಿಸಿರೋಡು- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.


ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲರವರ ಸಹೋದರಿ ಕೋಡಿಯಾಲ್ ಬೈಲು ನಿವಾಸಿ ಭಾಗೀರಥಿ (58 ವ.) ಮೃತಪಟ್ಟ ಮಹಿಳೆಯಾಗಿದ್ದಾರೆ.

ಚಾಲಕ ರೂಪೇಶ್ (40 ವ.) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರ (33 ವ.) ರವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮಾಹಿತಿ ಲಭಿಸಿದೆ.


ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆ ಸುಮಾರಿಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.


ಭಾಗೀರಥಿರವರ ಪುತ್ರಿ ಸುಚಿತ್ರರವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here