ಪುತ್ತೂರು: ವಿಧಾನ ಪರಿಷತ್ತು ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಒಳಮೊಗ್ರು ಮತ್ತು ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯರ ಸಭೆಯು ಬೂಡಿಯಾರ್ ರಾಧಾಕೃಷ್ಣ ರೈಯವರ ಮನೆ ವಠಾರದಲ್ಲಿ ಅ.17ರಂದು ನಡೆಯಿತು. ವಿಧಾನ ಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಮಾತನಾಡಿ, ಮುಂಬರುವ ವಿಧಾನ ಪರಿಷತ್ತು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಕಿಶೋರ್ ಕುಮಾರ್ ಬೊಟ್ಯಾಡಿಯವರನ್ನು ಅತೀ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಕೇಳಿಕೊಂಡರು. ಇದಲ್ಲದೆ ಭಾರತೀಯ ಜನತಾ ಪಾರ್ಟಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದರು.
ವೇದಿಕೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್, ಪ್ರಶಾಂತ್ ನೆಕ್ಕಿಲಾಡಿ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಚುನಾವಣಾ ಸಂಚಾಲಕ ನಿತೀಶ್ ಕುಮಾರ್ ಶಾಂತಿವನ ಹಾಗೂ ಬಿಜೆಪಿ ಮುಖಂಡರುಗಳಾದ ಜಿಲ್ಲಾ ಮಾಜಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಅಪ್ಪಯ್ಯ ಮಣಿಯಾಣಿ, ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಚಂದ್ರಶೇಖರ ರಾವ್ ಬಪ್ಪಳಿಗೆ, ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ಹಾಗೂ ಪಂಚಾಯತ್ ಸದಸ್ಯರುಗಳು, ಚುನಾವಣಾ ಪ್ರಭಾರಿಗಳು, ಮಹಾಶಕ್ತಿಕೇಂದ್ರ ಹಾಗೂ ಶಕ್ತಿ ಕೇಂದ್ರದ ಪ್ರಮುಖರು ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಆರ್ಯಾಪು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಜಯ ಬಿ.ಎಸ್ ಸ್ವಾಗತಿಸಿದರು. ನೆಟ್ಟಣಿಗೆ ಮುಡ್ನೂರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಲೋಕೇಶ್ ಚಾಕೊಟೆ ವಂದಿಸಿದರು.