ʼಐತಿಹಾಸಿಕ ಕಾರ್ಯಕ್ರಮಕ್ಕೆ ಬಂದು ಹಾರೈಸಿʼ- ‘ಅಶೋಕ‌ ಜನ-ಮನ’ಕ್ಕೆ ಸಿಎಂ,ಡಿಸಿಎಂಗೆ ಆಹ್ವಾನ

0

ಪುತ್ತೂರು: ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ನ.2 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ‌ ನಡೆಯಲಿರುವ ʼಅಶೋಕ ಜನಮನʼ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ‌ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಯಿತು.


ಅ.18ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ,ಉಪ‌ಮುಖ್ಯಮಂತ್ರಿಯನ್ನು ಭೇಟಿಯಾದ ಶಾಸಕರು ಪುತ್ತೂರಿನ ಐತಿಹಾಸಿಕ ಈ ಕಾರ್ಯಕ್ರಮಕ್ಕೆ ಬಂದು ಹಾರೈಸುವಂತೆ ಶಾಸಕರು‌ ಮನವಿ ಮಾಡಿದರು. ಕಾರ್ಯಕ್ರಮಕ್ಕೆ ಬರುವುದಾಗಿ ಇಬ್ಬರೂ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.


ವರ್ಷಂಪ್ರತಿ ದೀಪಾವಳಿ ಪ್ರಯುಕ್ತ ನಡೆಯುವ ವಸ್ತ್ರದಾನ ಹಾಗೂ ಸಹಭೋಜನ ಕಾರ್ಯಕ್ರಮದಲ್ಲಿ ಈ ಬಾರಿ 75,000 ಮಿಕ್ಕಿ ಮಂದಿಗೆ ವಸ್ತ್ರದಾನ ನಡೆಯಲಿದೆ. ಬಹಳ ಅದ್ದೂರಿಯಾಗಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಮುಖ ರಾಜಕೀಯ ನೇತಾರರು‌ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್‌ ನ ಪ್ರಮುಖರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here