ಪುತ್ತೂರು: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯ ಆಚರಿಸುವ ಸಲುವಾಗಿ ಇದರ ಪೂರ್ವಭಾವಿ ಸಭೆಯನ್ನು ಅ.22ರಂದು ಮಧ್ಯಾಹ್ನ 3 ಗಂಟೆಗೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿಯ ಸಭಾಂಗಣದಲ್ಲಿ ಪುತ್ತೂರು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು.
ಸಭೆಯಲ್ಲಿ ರಾಜ್ಯೋತ್ಸವದ ಅಂಗವಾಗಿ ಪೂ.8-00 ಗಂಟೆಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ದರ್ಬೆ ವೃತ್ತದಿಂದ ಕನ್ನಡ ಭುವನೇಶ್ವರಿಯ ಭಾವಚಿತ್ರದೊಂದಿಗೆ ವೈಭವದ ಮೆರವಣಿಗೆಯ ಕುರಿತು ಹಾಗೂ ಇನ್ನೀತರ ಕಾರ್ಯಕ್ರಮಗಳ ಆಯೋಜನೆಯ ಕುರಿತು ಚರ್ಚಿಸಲಾಗುತ್ತದೆ.
ಆ ಸಲುವಾಗಿ ಪುತ್ತೂರು ನಗರದಲ್ಲಿನ ವಿವಿಧ ಸಂಘ -ಸಂಸ್ಥೆಗಳ ಅಧ್ಯಕ್ಷರು/ಪದಾಧಿಕಾರಿಗಳ, ಸಾಹಿತಿಗಳ, ಕನ್ನಡ ಪ್ರೇಮಿಗಳು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ 2024 ರ ಸಾಲಿನ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ,ತಹಶೀಲ್ದಾರರು ಮತ್ತು ಅಧ್ಯಕ್ಷರು ಸಂಪೂರ್ಣ ಸಹಕಾರವನ್ನು ನೀಡುವಂತೆ ಪ್ರಕಟನೆಯ ಮೂಲಕ ಕೋರಿದ್ದಾರೆ.