





ನೆಲ್ಯಾಡಿ: ಸಂಸದರಾಗಿ ಚುನಾಯಿತರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವುಗೊಂಡಿರುವ ವಿಧಾನಪರಿಷತ್‌ನ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು ಗೋಳಿತ್ತೊಟ್ಟು ಗ್ರಾಮ ಪಂಚಾಯಿತಿಯ ಮತಗಟ್ಟೆಯಲ್ಲಿ ಬಿಜೆಪಿ ಬೆಂಬಲಿತ ಗ್ರಾ.ಪಂ.ಸದಸ್ಯರು ಮತಚಲಾಯಿಸಿದರು.


ಗೋಳಿತ್ತೊಟ್ಟು ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯರಾದ ಗ್ರಾ.ಪಂ.ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಬಾಬು ಪೂಜಾರಿ, ಸದಸ್ಯರಾದ ಜನಾರ್ದನ ಗೌಡ ಜೀವಿತಾ, ಗುಲಾಬಿ, ಬಾಲಕೃಷ್ಣ ಗೌಡ ಅಲೆಕ್ಕಿ, ಶಿವಪ್ರಸಾದ್ ಶಿವಾರು, ಪದ್ಮನಾಭ ಪೂಜಾರಿ, ಹೇಮಲತಾ, ಶೋಭಾಲತಾ, ಜಾನಕಿ, ಶೃತಿ, ಸಂಧ್ಯಾ ಅವರು ಮತಚಲಾಯಿಸಿದರು. ಬಿಜೆಪಿ ಸುಳ್ಯ ಮಂಡಲ ಸಮಿತಿ ಸದಸ್ಯ ಕುಶಾಲಪ್ಪ ಗೌಡ ಅನಿಲ, ಎಸ್‌ಟಿ ಮೋರ್ಚಾದ ಜೊತೆ ಕಾರ್ಯದರ್ಶಿ ಬಾಲಕೃಷ್ಣ ಅಲಂಗಪ್ಪೆ, ಶಕ್ತಿ ಕೇಂದ್ರದ ಅಧ್ಯಕ್ಷ ಜಯಂತ ಅಂಬರ್ಜೆ ಉಪಸ್ಥಿತರಿದ್ದರು.














