ಸವಣೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಸಮಗ್ರ ಪ್ರಶಸ್ತಿ

0

ಕಾಣಿಯೂರು: ಪಟ್ಟೆ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.


ಪ್ರಾಥಮಿಕ ಬಾಲಕರ ವಿಭಾಗದಲ್ಲಿ ರಚನ್ ಸಿ. ಎ(7ನೇ )600ಮೀ ಪ್ರಥಮ, 400ಮೀ ತೃತೀಯ, ಇಶಾನ್ ಪಿ. ಎಸ್(6ನೇ )ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಸೂರಜ್ ಬಿ. ಆರ್(7ನೇ )ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಾಥಮಿಕ ವಿಭಾಗದ ಬಾಲಕರ4X100 ರಿಲೇ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಜಾನ್ವಿ ಎಂ. ವಿ( 7ನೇ)200ಮೀ ದ್ವಿತೀಯ ಸ್ಥಾನ ಹಾಗೂ ಪ್ರಾಥಮಿಕ ಬಾಲಕಿಯರು ವಿಭಾಗದ 4X100ರಿಲೇಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


8ನೇ ತರಗತಿ ಬಾಲಕರ ವಿಭಾಗದಲ್ಲಿ ವಿಕಾಸ್ 600ಮೀ ಪ್ರಥಮ ಸ್ಥಾನವನ್ನು400ಮೀ ಪ್ರಥಮ ಸ್ಥಾನವನ್ನು ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನವನ್ನು, ನಿಶಾಂತ್ ಕೆ. ಜಿ 100ಮೀ ದ್ವಿತೀಯ ಸ್ಥಾನವನ್ನು200ಮೀ ತೃತೀಯ ಸ್ಥಾನವನ್ನು ಶ್ರುತನ್ ಪೂಜಾರಿ400ಮೀ ತೃತೀಯ ಸ್ಥಾನವನ್ನು 4X100 ರಿಲೇಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರೇಕ್ಷಕ್ ಸಿ (9ನೇ ಕ. ಮಾ)3000ಮೀ ಪ್ರಥಮ, 1500ಮೀ ಪ್ರಥಮ, 800ಮೀ ದ್ವಿತೀಯ ಸ್ಥಾನವನ್ನು ಸಾಥ್ವಿಕ್(10ನೇ ಆ.ಮಾ) 100ಮೀ ಪ್ರಥಮ, 200ಮೀ ಪ್ರಥಮ,ಸಮರ್ಥ್ ಪಿ. (9ನೇ ಆ ಮಾ)ತ್ರಿವಿಧ ಜಿಗಿತದಲ್ಲಿ ದ್ವಿತೀಯ ಜೀವನ್ ಎಂ. ಪಿ (10ನೇ ಆ ಮಾ )800ಮೀ ತೃತೀಯ ಸ್ಥಾನ ಮುಹಮ್ಮದ್ ರಿಜ್ವಾನ್ (10ನೇ ಕ ಮಾ ) ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ, ಪ್ರೌಢಶಾಲಾ ಬಾಲಕರು 4X400ರಿಲೇ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಧನಲಕ್ಷ್ಮೀ ಸಿ. ಎಂ (10ಆ ಮಾ )3000ಮೀ ಪ್ರಥಮ,1500 ಮೀ ಪ್ರಥಮ 800ಮೀ ಪ್ರಥಮಸ್ಥಾನವನ್ನು, ಬಿ. ಎಂ ದೇಚಮ್ಮ (10ನೇ ಆ ಮಾ ) ಎತ್ತರದ ಜಿಗಿದಲ್ಲಿ ತೃತೀಯ ಸ್ಥಾನ ಹಾಗೂ ಪ್ರೌಢಶಾಲಾ ಬಾಲಕಿಯರು 4X100ರಿಲೇ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಮತ್ತು 8ನೇ ತರಗತಿ ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. 8ನೇ ತರಗತಿ ಬಾಲಕರ ವಿಭಾಗದಲ್ಲಿ ವಿಕಾಸ್, ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರೇಕ್ಷಕ್ ಸಿ ಮತ್ತು ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಧನಲಕ್ಷ್ಮೀ ಸಿ. ಎಂ ವ್ಯಯಕ್ತಿಕ ಚಾಂಪಿಯನ್ ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರು ತರಬೇತಿ ನೀಡಿರುತ್ತಾರೆ.


ವಿಜೇತರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಗನ್ನಾಥ ರೈ ನುಳಿಯಾಲು, ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿವೀಶ್ ಮುರುಳ್ಯ, ಸಂಸ್ಥೆಯ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದ , ಶಿಕ್ಷಕೇತರ ವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here