ಪುತ್ತೂರು: ವಿಧಾನಪರಿಷತ್ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1693 ಮತಗಳ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆಗೆ ಅ.21ರಂದು ಮತದಾನ ನಡೆದಿತ್ತು. ಇಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿಯ ಅಭ್ಯರ್ಥಿ ಕಿಶೋರ್ ಬೊಟ್ಯಾಡಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಎಸ್ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು, ಪಕ್ಷೇತರ ಅಭ್ಯರ್ಥಿ ದಿನಕರ್ ರವರ ವಿರುದ್ಧ ಕಿಶೋರ್ ಕುಮಾರ್ ಬೊಟ್ಯಾಡಿ 1693 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.