ಬೆಂಗಳೂರಿನಲ್ಲಿ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್ ಶಿಪ್ ಯಶಸ್ವಿಗೆ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷ ಬಿ ಗುಣರಂಜನ್ ಶೆಟ್ಟಿಯವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

0

ಪುತ್ತೂರು: 2024ರ ಸೀನಿಯರ್ ’ಕುಸ್ತಿ’ ರಾಷ್ಟ್ರೀಯ ಚಾಂಪಿಯನ್‌ಶಿಪ್ ಡಿಸೆಂಬರ್ 5ರಿಂದ 8 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಕುಸ್ತಿ ರಾಜ್ಯದಲ್ಲಿ ಆಯೋಜನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆ ಮತ್ತು ಮುಂದೆ ನಡೆಯುವ ತಯಾರಿಗೆ ಸಂಬಂಧಿಸಿ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರು ಮತ್ತು ಭಾರತೀಯ ಕುಸ್ತಿ ಒಕ್ಕೂಟದ ಜಂಟಿ ಕಾರ್ಯದರ್ಶಿಯಾಗಿರುವ ಪುತ್ತೂರಿನ ಬಿ ಗುಣರಂಜನ್ ಶೆಟ್ಟಿಯವರು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಸ್ಪರ್ಧಾ ಪಟ್ಟಿಯನ್ನು ಶ್ರೀ ದೇವರ ಸತ್ಯ ಧರ್ಮ ನಡೆಯಲ್ಲಿಟ್ಟು ಪ್ರಾರ್ಥನೆ ಮಾಡಿದರು.


ಸೀನಿಯರ್ ಕುಸ್ತಿ ಚಾಂಪಿಯನ್ ಶೀಪ್ ಡಿ.5ರಿಂದ 8ರ ತನಕ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಾಟಕ್ಕೆ ಸಂಬಂಧಿಸಿ ಸ್ಪರ್ಧಾ ಪಟ್ಟಿಯನ್ನು ಅವರು ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಇರಿಸಿ ಪ್ರಾರ್ಥನೆ ಬಳಿ ಬಳಿಕ ಮಾದ್ಯಮದ ಮುಂದೆ ಬಿಡುಗಡೆಗೊಳಿಸಿದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಪ್ರಾರ್ಥನೆ ಸಲ್ಲಿಸಿದರು.


ದೇವರ ಆಶೀರ್ವಾದ ಬೇಡಲು ಬಂದಿದ್ದೇನೆ:
ಕರ್ನಾಟಕದಲ್ಲಿ ಸೀನಿಯರ್ ಕುಸ್ತಿ ಚಾಂಪಿಯನ್‌ಶಿಫ್ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆ ಮತ್ತು ಮುಂದೆ ನಡೆಯುವ ತಯಾರಿಗೆ ಸಂಬಂಧಿಸಿ ಮಹಾಲಿಂಗೇಶ್ವರ ದೇವರ ಸಂಪೂರ್ಣ ಅಶೀರ್ವಾದ ಬೇಡಲು ಬಂದಿದ್ದೇನೆ. ಈ ಪ್ರಮುಖವಾದ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದವರು ಮುಂದೆ ವಿಶ್ವಚಾಂಪಿಯನ್ ಶಿಪ್‌ನಲ್ಲಿ ಸ್ಪರ್ಧಿಸುವ ಅವಕಾಶ ಕಲ್ಪಿಸಲಾಗುತ್ತದೆ. ಕರ್ನಾಟಕದಲ್ಲಿ ಈ ಪಂದ್ಯಾಟವನ್ನು ಆಯೋಜನೆ ಮಾಡುವುದರಿಂದ ದಕ್ಷಿಣ ಭಾರತದ ಎಲ್ಲಾ ಕ್ರೀಡಾಪಟುಗಳಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಸಿಗುತ್ತದೆ. ಕರ್ನಾಟಕದಲ್ಲಿರುವ ಎಲ್ಲಾ ಕುಸ್ತಿ ಪಟಗಳು, ಗರಡಿ ಮನೆಗಳು ಸಹಿತ ಎಲ್ಲರು ಭಾಗವಹಿಸುವಂತೆ ಗುಣರಂಜನ್ ಶೆಟ್ಟಿ ಮನವಿ ಮಾಡಿದರು. ಇದೇ ಸಂದರ್ಭ ಬೆಂಗಳೂರಿನಲ್ಲಿ ಕಂಬಳಕ್ಕೆ ಪೇಟಾದಿಂದ ಆಗಿರುವ ತೊಂದರೆಗೆ ಸಂಬಂಧಿಸಿ ಯಾವುದೇ ಸಮಸ್ಯೆ ಆಗುವುದಿಲ್ಲ. ನ್ಯಾಯಾಲಯದಿಂದ ಉತ್ತಮ ತೀರ್ಪು ಬರಲಿದೆ. ಬೆಂಗಳೂರಿನಲ್ಲಿ ಕಂಬಳ ನಡೆಯುತ್ತದೆ ಎಂದರು. ಈ ಸಂದರ್ಭ ಸಿಝ್ಲರ್ ಪ್ರಶಾಂತ್, ರಾಮದಾಸ್ ವಿಟ್ಲ, ಉಜ್ವಲ್ ಪ್ರಭು, ಸುಜಿತ್ ರೈ ಸಹಿತ ಹಲವಾರು ಮಂದಿ ಉಪಸ್ಥಿರಿದ್ದರು.

LEAVE A REPLY

Please enter your comment!
Please enter your name here