ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಮಂಗಳೂರು ಇದರ ಆಶ್ರಯದಲ್ಲಿ ಅ.22ರಂದು ಮೂಡಬಿದ್ರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ 2024 – 25 ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಅಹಿಜಿತ್ ಕೆ.ಎಂ ಜಾವೆಲಿನ್ ಥ್ರೋ ನಲ್ಲಿ (52.74) ಮೀ ಎಸೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ತುಮಕೂರು ಮಹಾತ್ಮ ಗಾಂಧೀಜಿ ಕ್ರೀಡಾಂಗಣದಲ್ಲಿ ನ.7 ರಿಂದ 10 ನಡೆಯಲಿರುವ ರಾಜಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.
ಅದೇ ರೀತಿ ದ್ವಿತೀಯ ವಾಣಿಜ್ಯ ವಿಭಾಗದ ಆಶ್ರಯ್ ಎನ್ 400ಮೀ ಅಡೆ-ತಡೆ ಓಟದಲ್ಲಿ ತೃತೀಯ ಹಾಗೂ 4×400ಮೀ ರಿಲೇ ಅಲ್ಲಿ ತೃತೀಯ ಸ್ಥಾನ ಮತ್ತು ಪ್ರಥಮ ವಾಣಿಜ್ಯ ವಿಭಾಗದ ರೋಹನ್ ಬೋಪಣ್ಣ ಎ. ಏನ್ ಹಾಗೂ ವಿನ್ಯಾಸ್ ಬಿ.ಪಿ 4×400ಮೀ ರಿಲೇ ಅಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.